Tuesday, April 16, 2024

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ ಎಪ್ರಿಲ್ 19ರಿಂದ ಎಪ್ರಿಲ್ 28ರ ವರೆಗೆ ನಡೆಯಲಿದ್ದು, ಎಪ್ರಿಲ್ಳ 28ರಂದು ಉರೂಸ್ ಹಾಗೂ ಅನ್ನದಾನ ಖಾಝಿ ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಕೂರತ್ ಮತ್ತು ಮುದರಿಸ್ ಇಬ್ರಾಹಿಂ ಫೈಝಿ ಪುಳಿಕೂರ್ ಉಸ್ತಾದರ ನೇತೃತ್ವದಲ್ಲಿ ನಡೆಯಲಿದೆ ಎಂದು ಕಟ್ಟತ್ತಿಲ ಜುಮ್ಮಾ ಮಸೀದಿ ಜಮಾಅತ್ ಕಮಿಟಿ ಪ್ರಧಾನ ಕಾರ್ಯದರ್ಶಿ ಕೆ.ಎಮ್ ಮುಹ್‍ಯಿದ್ದೀನ್ ಮದನಿ ಕಟ್ಟತ್ತಿಲ ತಿಳಿಸಿದರು.

ಅವರು ವಿಟ್ಲದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಎಪ್ರಿಲ್ 19ರಂದು ಜುಮಾ ನಮಾಝಿನ ಬಳಿಕ ಅಸ್ಸಯ್ಯಿದ್ ಹಾಮಿದ್ ಅಲ್ ಹಾದಿ ತಂಙಳ್ ಮಂಜೇಶ್ವರ ನೇತೃತ್ವದಲ್ಲಿ ಕೂಟು ಝಿಯಾರತ್ ಮತ್ತು ಧ್ವಜಾರೋಹಣ ನಡೆಯಲಿದೆ. ಪಾತೂರು ಉಸ್ತಾದ್ ಉದ್ಘಾಟಿಸಲಿದ್ದಾರೆ. ಪ್ರತಿದಿನ ಧಾರ್ಮಿಕ ಪ್ರಭಾಷಣ ನಡೆಯಲಿದೆ. ಎಪ್ರಿಲ್ 22ರಂದು ಕುಂಬೋಳ್ ಜಾಫರ್ ಸ್ವಾದಿಖ್ ತಂಙಳ್ ಆಧ್ಯಾತ್ಮಿಕ ಜಲಾಲಿಯ ರಾತೀಬ್‍ಗೆ ನೇತೃತ್ವ ನೀಡಲಿದ್ದಾರೆ. 25ರಂದು ರಾತ್ರಿ ಅಸ್ಸಯ್ಯಿದ್ ಅಹ್ಮದ್ ಶಿಹಾಬುದ್ದೀನ್ ತಂಙಳ್ ಸ್ವಲಾತ್ ಮಜ್ಲಿಸ್‍ಗೆ ನೇತೃತ್ವ ನೀಡಲಿದ್ದಾರೆ. ಮೂರು ದಶಕಗಳ ಸೇವೆ ಸಲ್ಲಿಸಿದ ಇಬ್ರಾಹಿಂ ಫೈಝಿ ಪುಳಿಕೂರು ಉಸ್ತಾದರಿಗೆ ಶಿಷ್ಯ ವೃಂದದ ವತಿಯಿಂದ ಗೌರವಾರ್ಪಣೆ ನಡೆಯಲಿದೆ. 26ರಂದು ನಡೆಯುವ ಖತ್ಮುಲ್ ಖುರ್ ಆನ್ ಮತ್ತು ತಾಜುಲ್ ಉಲಮಾ ಅನುಸ್ಮರಣೆಗೆ ಜೈನುಲ್ ಉಲಮಾ ಮಾಣಿ ಉಸ್ತಾದ್ ನೇತೃತ್ವ ನೀಡಲಿದ್ದಾರೆ. 28ರಂದು ಬೆಳಿಗ್ಗೆ ಕೂಟು ಝಿಯಾರತ್ ಮೌಲಿದ್ ಪಾರಾಯಣ, ಮತ್ತು ಉರೂಸ್ ಸಮಾರೋಪ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕಟ್ಟತ್ತಿಲ ಜುಮಾ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಡಿ.ಎ ಅಬ್ದುಲ್ ಹಮೀದ್ ಹಾಜಿ, ಉಪಾಧ್ಯಕ್ಷ ಕೆ.ಪಿ ಅಬ್ದುಲ್ ಖಾದರ್ ಟಿಫ್‍ಟಾಫ್, ಕೆ ಅಬ್ದುಲ್ ಖಾದರ್ ಟೆಲಿಫೋನ್, ಮಾಜಿ ಅಧ್ಯಕ್ಷ ಎ.ಸಿ ಮೊಯಿದ್ದೀನ್ ಕುಂಞ ಸಾಲೆತ್ತೂರು ಉಪಸ್ಥಿತರಿದ್ದರು.

More from the blog

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಕಲ್ಲಡ್ಕ: ಖಾಸಗಿ ಬಸ್ಸಿಗೆ ಪಿಕಪ್ ಢಿಕ್ಕಿ: ಹಲವರಿಗೆ ಗಾಯ

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ...