Saturday, April 6, 2024

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ

ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ 39.9 ಡಿ.ಸೆ. ಮತ್ತು ಉಡುಪಿ ಜಿಲ್ಲೆಯ ಅಜೆಕಾರಿನಲ್ಲಿ 39.2 ಡಿ.ಸೆ. ಉಷ್ಣಾಂಶ ದಾಖಲಾಗಿದೆ.

ವಿಪತ್ತು ನಿರ್ವಹಣ ಪ್ರಾಧಿಕಾರದಿಂದ ಸೂಚನೆ

ಬಿಸಿಲ ಬೇಗೆಯಿಂದ ತಪ್ಪಿಸಲು ದ.ಕ. ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರದಿಂದ ಸಾರ್ವಜನಿಕರಿಗೆ ಕೆಲವೊಂದು ಸೂಚನೆಗಳನ್ನು ಪ್ರಕಟಿಸಿದೆ. ಅದರಂತೆ ಆಯಾಸವಾದಾಗ ಮಾತ್ರವಲ್ಲ, ಆಗಾಗ ನೀರು ಕುಡಿಯುತ್ತಲೇ ಇರಬೇಕು, ನೀರಿನಂತಿರುವ ಕಲ್ಲಂಗಡಿ, ಕಿತ್ತಳೆ, ಮೂಸಂಬಿ, ದ್ರಾಕ್ಷಿ, ಅನಾನಸ್‌ ಹಣ್ಣುಗಳನ್ನು ಸೇವಿಸಿ ಎಂದು ತಿಳಿಸಿದೆ.

ನೀರಿನ ಅಂಶವುಳ್ಳ ಆಹಾರಗಳನ್ನು ಸೇವನೆ ಮಾಡಿ, ಮನೆಯಿಂದ ಹೊರಗಡೆ ಕಾಲಿಡುವಾಗ ತಲೆಗೆ ಕ್ಯಾಪ್‌ ಧರಿಸುವುದು ಒಳ್ಳೆಯದು, ಬೇಸಗೆ ಸಮಯದಲ್ಲಿ ಸಡಿಲ ಉಡುಪುಗಳನ್ನು ಧರಿಸುವುದು ಸೂಕ್ತ, ಬಿಸಿಲಿಗೆ ಬರಿಗಾಲಿನಲ್ಲಿ ನಡೆಯುವುದನ್ನು ನಿಲ್ಲಿಸಿ, ಚಪ್ಪಲಿ ಅಥವಾ ಶೂ ಧರಿಸಿ ಎಂದು ಹೇಳಲಾಗಿದೆ.

ಮಕ್ಕಳ ಆರೋಗ್ಯದ ಮೇಲೆ ಬೇಸಗೆಯ ಹವಾಮಾನ ಪರಿಣಾಮ ಬೀರದಂತೆ ಜಾಗ್ರತೆ ವಹಿಸಬೇಕು. ಮಕ್ಕಳಲ್ಲಿ ನಿರ್ಜಲೀಕರಣ ತಪ್ಪಿಸಲು ಪ್ರತೀ ದಿನ 2ರಿಂದ 3 ಲೀಟರ್‌ ನೀರನ್ನು ಆಯಾ ಆಯಸ್ಸಿಗೆ ಅನುಗುಣವಾಗಿ ನೀಡಬೇಕು. ಜ್ವರ, ಶೀತ, ತಲೆನೋವು, ಬೊಕ್ಕೆಗಳು ಕಾಣಿಸಿಕೊಂಡಲ್ಲಿ ನುರಿತ ವೈದ್ಯರನ್ನು ಸಂಪರ್ಕಿಸಿ ಎಂದು ತಿಳಿಸಲಾಗಿದೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ...

ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನ ಜಖಂಗೊಳಿಸಿದ ಭಕ್ತರು

ಮುಲ್ಕಿ: ದೇವರ ರಥ ಹೋಗುವ ದಾರಿಯಲ್ಲಿದ್ದ ವಾಹನಗಳನ್ನು ಭಕ್ತರು ಜಖಂ ಗೊಳಿಸಿದ ಘಟನೆ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ಇತ್ತೀಚೆಗೆ ನಡೆದಿದ್ದು, ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ. ಜಾತ್ರೆಯಲ್ಲಿ ದೇವರ ರಥ ಹೋಗುವ...