Thursday, April 18, 2024

ರಾಜ್ಯದಲ್ಲಿ ಮತ್ತೆ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಉತ್ತರ ಒಳನಾಡು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ 35ರಿಂದ 38 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿತ್ತು. ಇದೀಗ ರಾಜ್ಯದ ಉತ್ತರ ಕರ್ನಾಟಕದಲ್ಲಿ ಮತ್ತೆ ತಾಪಮಾನ ಏರಿಕೆಯಾಗಿದ್ದು, ಬುಧವಾರ, ಬೆಂಗಳೂರು 36.7, ಬಾಗಲಕೋಟೆಯಲ್ಲಿ 39.8, ಮಂಡ್ಯದಲ್ಲಿ 38.6, ದಾವಣಗೆರೆಯಲ್ಲಿ 39.7, ಚಾಮರಾಜನಗರ 37.4, ಚಿತ್ರದುರ್ಗ 38.5 ಡಿ.ಸೆ. ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ವಿವಿಧೆಡೆ ಮಳೆಯಾಗುವ ಸಾಧ್ಯತೆ

ಗುರುವಾರ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧಯತೆಯಿದೆ. ಎ. 18ರಂದು ಧಾರವಾಡ, ಗದಗ, ಬೆಳಗಾವಿ, ವಿಜಯಪುರ ಮತ್ತು ಹಾವೇರಿ ಜಿಲ್ಲೆ ಗಳಲ್ಲಿ ಹಾಗೂ ಎ. 19ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿ ಕರಾವಳಿ ಕರ್ನಾಟಕದ ಜಿಲ್ಲೆಗಳು, ಬೀದರ್‌, ಕಲಬುರಗಿ, ವಿಜಯಪುರ, ಗದಗ ಮತ್ತು ರಾಯಚೂರು, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಿಡಿಲು, ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಗಳಿವೆ. ಜತೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

More from the blog

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...