Friday, April 5, 2024

ಯದುವೀರ್​​ ಒಡೆಯರ್​ ಬಳಿ ಇರೋ ಆಸ್ತಿ ಎಷ್ಟು ಗೊತ್ತಾ…?

ಮೈಸೂರು : ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದಿಂದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಮೈಸೂರು ಒಡೆಯರ್‌ ಆಗಿರುವ ಯದುವೀರ್‌ ಈ ವೇಳೆ ಸುಮಾರು 5 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ. ತಮ್ಮ ಹೆಸರಲ್ಲಿ ಯಾವುದೇ ಕೃಷಿ ಭೂಮಿಯಾಗಲಿ, ಸೈಟ್‌ ಆಗಲಿ, ಮನೆ ಆಗಲಿ ಇಲ್ಲ ಎಂದು ತಮ್ಮ ಅಫಿಡವಿಟ್‌ನಲ್ಲಿ ಘೋಷಿಸಿಕೊಂಡಿದ್ದಾರೆ.

ಯದುವೀರ್‌ ಒಡೆಯರ್‌ ಅವರ ಕೈಯಲ್ಲಿ ಸದ್ಯ ಒಂದು ಲಕ್ಷ ರೂ. ನಗದನ್ನು ಹೊಂದಿದ್ದು, ವಿವಿಧ ಬ್ಯಾಂಕ್‌ ಅಕೌಂಟ್‌ಗಳಲ್ಲಿ 1.36 ಕೋಟಿ ರೂ. ಅನ್ನು ಹೊಂದಿದ್ದಾರೆ. 3.25 ಕೋಟಿ ರೂ. ಮೌಲ್ಯದ 4 ಕೆಜಿ ಚಿನ್ನ, 14 ಲಕ್ಷ ರೂ. ಮೌಲ್ಯದ 20 ಕೆಜಿ ಬೆಳ್ಳಿಯನ್ನು ಹೊಂದಿದ್ದಾರೆ. ಒಟ್ಟು 4.99 ಕೋಟಿ ರೂ. ಚರಾಸ್ತಿ ಹೊಂದಿರುವುದಾಗಿ ಯದುವೀರ್‌ ಘೋಷಿಸಿಕೊಂಡಿದ್ದಾರೆ.

ಇನ್ನು, ಅವರ ಪತ್ನಿ ತ್ರಿಷಿಕಾ ಬಳಿ 75 ಸಾವಿರ ರೂ. ನಗದು ಇದ್ದು, ಎಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ 1 ಲಕ್ಷ ರೂ. ಹೊಂದಿದ್ದಾರೆ. 90 ಲಕ್ಷ ರೂ. ಮೌಲ್ಯದ 2 ಕೆಜಿ ಚಿನ್ನ, 5.5 ಲಕ್ಷ ರೂ. ಮೌಲ್ಯದ 100 ಗ್ರಾಂ ಚಿನ್ನದ ಗಟ್ಟಿಗಳಿದ್ದು, 7 ಲಕ್ಷ ರೂ. ಮೌಲ್ಯದ 10 ಕೆಜಿ ಬೆಳ್ಳಿಯನ್ನು ಹೊಂದಿದ್ದಾರೆ. ಒಟ್ಟು 1.04 ಕೋಟಿ ರೂ. ಮೌಲ್ಯದ ಚರಾಸ್ತಿಯನ್ನು ಘೋಷಿಸಿದ್ದಾರೆ.

ಯದುವೀರ್‌ ಪುತ್ರನ ಕೈಯಲ್ಲಿ 5 ಸಾವಿರ ರೂ. ನಗದು ಇದ್ದು, ಮ್ಯೂಚುವಲ್‌ ಫಂಡ್‌ನಲ್ಲಿ 1.49 ಕೋಟಿ ರೂ. ಹೂಡಿಕೆ ಮಾಡಲಾಗಿದೆ. ಟಾಟಾ ಲೈಫ್‌ ಇನ್ಸೂರೆನ್ಸ್‌ನಲ್ಲಿ 1.89 ಕೋಟಿ ರೂ. ಹೂಡಿಕೆ ಮಾಡಿದ್ದು, 12 ಲಕ್ಷ ರೂ. ಮೌಲ್ಯದ 400 ಗ್ರಾಂ ಚಿನ್ನ ಇದೆ. ಇವರ ಹೆಸರಲ್ಲಿ ಒಟ್ಟು 3.63 ಕೋಟಿ ರೂ. ಚರಾಸ್ತಿ ಇದೆ ಎಂದು ಹೇಳಲಾಗಿದೆ.

More from the blog

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಬುಧವಾರ ನಾಮಪತ್ರ ಸಲ್ಲಿಸಿದರು. ಇನ್ನು ಕೋಟ ಶ್ರೀನಿವಾಸ್ ಪೂಜಾರಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಪಕ್ಷದ ಕಾರ್ಯಕರ್ತರ ಬೃಹತ್‌ ಸಮಾವೇಶ...

ಮಿತಿ ಮೀರಿದ ತಾಪಮಾನ : ಖಡಕ್​ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿರು ಬಿಸಿಲು ಹೆಚ್ಚಳವಾಗುತ್ತಿದ್ದು ಮುಂದಿನ 14 ದಿನಗಳ ಕಾಲ ಬಿಸಿಗಾಳಿ ಬೀಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್​...