Monday, May 6, 2024

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಬೆಂಗಳೂರು: ಮೂರು ತಿಂಗಳ ವೇತನ ಬಾಕಿ ಬಿಡುಗಡೆಗೆ ಆಗ್ರಹಿಸಿ ಆ್ಯಂಬುಲೆನ್ಸ್‌ ನೌಕರರು ಮೇ 6ರ ರಾತ್ರಿ 8ರಿಂದ ರಾಜ್ಯಾದ್ಯಂತ ಆ್ಯಂಬುಲೆನ್ಸ್‌ ಸೇವೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ.

108 ಆ್ಯಂಬುಲೆನ್ಸ್‌ ಸೇವೆಯ ಉಸ್ತುವಾರಿ ವಹಿಸಿಕೊಂಡ ಜಿವಿಕೆ ಸಂಸ್ಥೆಯು 2023ರ ಡಿಸೆಂಬರ್‌ನಿಂದ ಎಪ್ರಿಲ್‌ ವರೆಗಿನ ವೇತನವನ್ನು ಬಾಕಿ ಇರಿಸಿಕೊಂಡಿದೆ. ಈ ನಡುವೆ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಮಾತುಕತೆ ನಡೆಸಿದಾಗ ಡಿಸೆಂಬರ್‌ ಹಾಗೂ ಜನವರಿ ತಿಂಗಳಿನ ಒಟ್ಟು ಮೊತ್ತದ ಅರ್ಧದಷ್ಟು ವೇತನ ಪಾವತಿಸಿದೆ. ಇನ್ನೂ 3 ತಿಂಗಳ ಪೂರ್ಣ ವೇತನ ಬಾಕಿಯಿದೆ ಎಂದು 108 ಆ್ಯಂಬುಲೆನ್ಸ್‌ ನೌಕರ ಸಂಘದ ಉಪಾಧ್ಯಕ್ಷ ಪರಮಶಿವಯ್ಯ ತಿಳಿಸಿದರು.

ಸೋಮವಾರ ರಾತ್ರಿ 8 ಗಂಟೆಯೊಳೆಗೆ ಬಾಕಿಯಿರುವ ವೇತನ ಬಿಡುಗಡೆ ಮಾಡಬೇಕು. ಒಂದು ವೇಳೆ ವೇತನ ಸಿಗದಿದ್ದರೆ ರಾಜ್ಯಾದ್ಯಂತ ಸೇವೆಯನ್ನು ಸ್ಥಗಿತಗೊಳಿಸುತ್ತೇವೆ. ಇದರಿಂದ ಆಗುವ ಅನಾಹುತಗಳಿಗೆ ಜಿವಿಕೆ ಸಂಸ್ಥೆ ಹೊಣೆಯಾಗಲಿದೆ ಎಂದು ಎಚ್ಚರಿಕೆ ನೀಡಿದರು. ಸರಕಾರಿ ವ್ಯವಸ್ಥೆಯಡಿ ರಾಜ್ಯಾದ್ಯಂತ 715ಕ್ಕೂ ಅಧಿಕ ಆ್ಯಂಬುಲೆನ್ಸ್‌ಗಳು ಕಾರ್ಯಾಚರಿಸುತ್ತಿದೆ. ಇದರಲ್ಲಿ ಡ್ರೈವರ್‌ ಹಾಗೂ ಸಹಾಯಕ ಸಿಬಂದಿ ಸಹಿತ 3000 ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ

More from the blog

ಕುಕ್ಕಾಜೆ ಕಾಪಿಕಾಡ್ ತಾಜುಲ್ ಉಲಮಾ ಮಸೀದಿ ಸ್ವಲಾತ್ ವಾರ್ಷಿಕ

ಇರಾ ಗ್ರಾಮದ ಕುಕ್ಕಾಜೆ ತಾಜುಲ್ ಉಲಮಾ ಮಸೀದಿಯಲ್ಲಿ ಪ್ರತಿ ವಾರ ನಡೆಸಿಕೊಂಡು ಬರುತ್ತಿರುವ ಸ್ವಲಾತ್ ವಾರ್ಷಿಕವು ಆದಿತ್ಯವಾರ ಮಗ್ರಿಬ್ ನಮಾಝಿನ ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಸಂಯುಕ್ತ ಖಾಝಿ ಅಸಯ್ಯದ್ ಫಝಲ್ ಕೊಯಮ್ಮ...

ನೇತ್ರಾವತಿ ನದಿಯಲ್ಲಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ನಾವೂರ ಎಂಬಲ್ಲಿ ಇಂದು ಸಂಜೆ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಹಾಗೂ...

ಗ್ರಾಮ ಸುಭಿಕ್ಷ ಕಾರ್ಯಕ್ರಮದ ಅಂಗವಾಗಿ ನೆಟ್ಲಾ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಸೀಯಾಳ ಅಭಿಷೇಕ

" ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್( ರಿ ) ಕಲ್ಲಡ್ಕ ವಲಯದ ವತಿಯಿಂದ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘಗಳ ಒಕ್ಕೂಟ, ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯ, ಶೌರ್ಯ ವಿಪತು...

ಹೆಚ್ಚುತ್ತಿದೆ ವೈರಲ್‌ ಜ್ವರ : ಬೊಂಡ ರಾಶಿಯಿಂದ ಸೊಳ್ಳೆಗಳು ಉತ್ಪಾದನೆ: ತುಂಗಪ್ಪ ಬಂಗೇರ ಆರೋಪ

ಬಂಟ್ವಾಳ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ ಜ್ವರ ಬಾಧಿತ ಪ್ರಕರಣಗಳು ಕಂಡು ಬರುತ್ತಿದ್ದು, ಶಂಕಿತ ಡೆಂಗ್ಯೂ ಜ್ವರ ಎಂಬ ವದಂತಿಗಳು ಹರಡುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾಮಪಂಚಾಯತ್ ವ್ಯಾಪ್ತಿಯ ಕೊಡಂಬೆಟ್ಟು ಗ್ರಾಮದ...