Tuesday, May 7, 2024

ಮದುವೆ ಸಭಾಂಗಣದ ಅವರಣದಲ್ಲಿ ವ್ಯಕ್ತಿಯ ರಕ್ತಸಿಕ್ತ ಮೃತದೇಹ ಪತ್ತೆ

ಬಂಟ್ವಾಳ: ಬಂಟವಾಳದ ಪ್ರತಿಷ್ಠಿತ ಮದುವೆ ಸಭಾಂಗಣದ ಅವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ.

ತಲಪಾಡಿಯಲ್ಲಿರುವ ಬಂಟವಾಳದ ಬಂಟರ ಭವನದ ಕಂಪೌಂಡ್ ನ ಒಳಗಡೆಯಲ್ಲಿ ರಕ್ತಸಿಕ್ತವಾಗಿ ಬಿದ್ದುಕೊಂಡಿರುವ ವ್ಯಕ್ತಿಯ ಶವ ಪತ್ತೆಯಾಗಿದೆ.

ಉಪ್ಪಿನಂಗಡಿ ವಳಾಲು ಮೂಲದ ನಿವಾಸಿ ಸಂತೋಷ್ ಎಂಬಾತನ ಶವ ಇದಾಗಿದೆ ಎಂದು ಪೋಲೀಸ್ ಮೂಲಗಳು ತಿಳಿಸಿವೆ.

ಬಂಟರ ಭವನದ ಹೊರಗಡೆಯಲ್ಲಿ ಈತನ ಸೇರಿದ ಬೈಕ್ ನಿಲ್ಲಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸಾವಿಗೆ ಸ್ಪಷ್ಟವಾದ ಕಾರಣ ಗೊತ್ತಾಗಿಲ್ಲವಾದರೂ ಪೋಲೀಸ್ ಮೂಲಗಳ ಪ್ರಕಾರ ಈತ ಬೈಕ್ ನಿಲ್ಲಿಸಿ ಕಂಪೌಂಡ್ ಮೇಲೆ ಕುಳಿತು ಕೊಂಡಿರಬೇಕು.ಅ ಸಂದರ್ಭದಲ್ಲಿ ನಿಯಂತ್ರಣ ಕಳೆದು ಕೆಳಗೆ ಬಿದ್ದಿರಬೇಕು ಎಂದ ಶಂಕಿಸಲಾಗಿದೆ.

ಹೆಚ್ಚಿನ ವಿವರ ಮೃತದೇಹದ ಮರಣೋತ್ತರ ಪರೀಕ್ಷೆ ಬಳಿಕ ತಿಳಿಯಬೇಕಾಗಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಹರೀಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

More from the blog

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಬೆಂಗಳೂರು: ಮೂರು ತಿಂಗಳ ವೇತನ ಬಾಕಿ ಬಿಡುಗಡೆಗೆ ಆಗ್ರಹಿಸಿ ಆ್ಯಂಬುಲೆನ್ಸ್‌ ನೌಕರರು ಮೇ 6ರ ರಾತ್ರಿ 8ರಿಂದ ರಾಜ್ಯಾದ್ಯಂತ ಆ್ಯಂಬುಲೆನ್ಸ್‌ ಸೇವೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ. 108 ಆ್ಯಂಬುಲೆನ್ಸ್‌ ಸೇವೆಯ ಉಸ್ತುವಾರಿ ವಹಿಸಿಕೊಂಡ ಜಿವಿಕೆ ಸಂಸ್ಥೆಯು...

ನೇತ್ರಾವತಿ ನದಿಯಲ್ಲಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ನಾವೂರ ಎಂಬಲ್ಲಿ ಇಂದು ಸಂಜೆ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಹಾಗೂ...

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ..

ಬೆಂಗಳೂರಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಅಲ್ಪಾವಧಿಯ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ​ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಬೀಳಲಿದೆ. ದಕ್ಷಿಣ ಕನ್ನಡ,...

ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

ಮಂಗಳೂರು: ಬೇಸಿಗೆಯ ಬಿಸಿ ಹೆಚ್ಚಾಗುತ್ತಿದ್ದಂತೆ ಮೊಟ್ಟೆಯ ಬೆಲೆಯಲ್ಲಿ ಇಳಿಕೆಯಾಗಿದೆ. 6.50ರ ಆಸುಪಾಸಿನಲ್ಲಿದ್ದ ಮೊಟ್ಟೆಯ ಬೆಲೆ ಮಂಗಳೂರು ಮತ್ತು ಉಡುಪಿಯಲ್ಲಿ 5.50 ರೂ.ಗೆ ಇಳಿದಿದೆ. ಮೊಟ್ಟೆಯ ಸಗಟು ದರ 4.80 ರಿಂದ 4.90 ರೂ.ಗೆ ತಲುಪಿದೆ....