ಮಂಗಳೂರು: ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಕರಾವಳಿಕರಾವಳಿ ಜನತೆಗೆ ರಾಜ್ಯ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ. ಇಂದಿನಿಂದ ಐದು ದಿನಗಳ ಕಾಲ ಕರಾವಳಿ ಭಾಗದಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಇಂದು ರಾತ್ರಿ ಉತ್ತರ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಸುರಿಯಲಿದೆ. ನಾಳೆ ಬೆಳಿಗ್ಗೆಯಿಂದ ಗಾಳಿ ಸಹಿತ ಭಾರಿ ಮಳೆಯಾಗಲಿದೆ. ಇಷ್ಟೇ ಅಲ್ಲ ಕರಾವಳಿ ಹಾಗೂ ಮಲೆನಾಡು ತಾಲ್ಲೂಕುಗಳಲ್ಲಿ ಮಳೆ ಆರ್ಭಟ ಮುಂದುವರಿಯಲಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಐದು ದಿನ ಮಳೆಯಾಗಲಿದೆ. ಹಾಗಾಗಿ ಕರಾವಳಿ ಕರ್ನಾಟಕದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ ಕರ್ನಾಟಕ ಭಾಗದಲ್ಲಿ ಮಳೆ ಮುನ್ಸೂಚನೆ ನೀಡಿರೋ ಹವಮಾನ ಇಲಾಖೆ, ಆಳ ಸಮುದ್ರ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಿದೆ.