Sunday, May 5, 2024

ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್ : 4 ಬದಲು 8 ಮಂದಿಗೆ ಸೇವೆ ಸಂದಾಯಕ್ಕೆ ಅವಕಾಶ

ಬಂಟ್ವಾಳ: ಕಾರಣೀಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಸುಮಾರು 23 ಸಾವಿರಕ್ಕೂ ಅಧಿಕ ಕೋಲ ಸೇವೆಗಳ ಬುಕ್ಕಿಂಗ್ ಇರುವುದರಿಂದ ಭಕ್ತರಿಗೆ ಶೀಘ್ರ ಸೇವೆ ಸಂದಾಯದ ಅವಕಾಶದ ಹಿನ್ನೆಲೆಯಲ್ಲಿ ಪ್ರತಿ ನಿತ್ಯ ನಡೆಯುತ್ತಿದ್ದ ಕೋಲ ಸೇವೆಯಲ್ಲಿ 4 ಬದಲಿಗೆ 8 ಮಂದಿಗೆ ಸೇವೆ ಸಂದಾಯಕ್ಕೆ ಅವಕಾಶ ನೀಡಿದ್ದು, ಮೇ 3ರಿಂದ ಚಾಲನೆ ನೀಡಲಾಗಿದೆ.

ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಹಾಗೂ ಕೋಲ ಸೇವೆಗಳು ವಿಶೇಷವಾಗಿದ್ದು, ವಾರದ 3 ದಿನ ಅಗೇಲು ಹಾಗೂ ವಾರದ 5 ದಿನ ಕೋಲ ಸೇವೆಗಳು ಸಂದಾಯವಾಗುತ್ತದೆ. ಬೆಳಗ್ಗೆ ನಿಗದಿತ ಸಮಯದೊಳಗೆ ಬಂದವರಿಗೆ ಎಷ್ಟು ಬೇಕಾದರೂ ಅಗೇಲು ಸೇವೆ ನೀಡುವುದಕ್ಕೆ ಅವಕಾಶವಿದ್ದು, ಆದರೆ ಈ ಹಿಂದೆ ದಿನವೊಂದಕ್ಕೆ ಕೋಲ ಸೇವೆ ನೀಡುವುದಕ್ಕೆ ಬರೀ ನಾಲ್ಕು ಮಂದಿಗೆ ಮಾತ್ರ ಅವಕಾಶವಿತ್ತು.

ಆದರೆ ಕೋಲ ಸೇವೆಗಳ ಬುಕ್ಕಿಂಗ್ ಹೆಚ್ಚಿದ್ದು, ಲೆಕ್ಕಾಚಾರ ಹಾಕಿದರೆ ಅದು ಪೂರ್ಣಗೊಳುವುದಕ್ಕೆ ಕನಿಷ್ಠ 35 ವರ್ಷ ಬೇಕಾಗುತ್ತದೆ ಅಂದಾಜಿಸಲಾಗಿತ್ತು. ಸೋಮವಾರ ಹಾಗೂ ಶನಿವಾರ ಹೊರತುಪಡಿಸಿ ವಾರದಲ್ಲಿ 5 ದಿನ ಕೋಲ ಸೇವೆಗೆ ಅವಕಾಶವಿದ್ದರೂ, ತುಳುವಿನ ಆಟಿ ತಿಂಗಳು, ಅಮಾವಾಸ್ಯೆ, ಷಷ್ಠಿ, ಸಜೀಪ ಮಾಗಣೆಯ ಜಾತ್ರೆ, ಉತ್ಸವ ಮೊದಲಾದ ಸಂದರ್ಭ ಕೊಲ ಸೇವೆ ಇರುವುದಿಲ್ಲ. ಹೀಗಾಗಿ ವರ್ಷಕ್ಕೆ 600-700 ಮಂದಿಗೆ ಮಾತ್ರ ಕೋಲ ಸೇವೆಗೆ ಅವಕಾಶ ಸಿಗುತ್ತಿತ್ತು.

ಹೀಗಾಗಿ ಭಕ್ತರಿಗೆ ಶೀಘ್ರ ಸೇವೆಗೆ ಅವಕಾಶ ಸಿಗುವ ದೃಷ್ಟಿಯಿಂದ ದೈವದ ಬಳಿ ಹರಕೆ ಮಾಡಿ ಮಾಗಣೆಯ ದೈವದ ಅಪ್ಪಣೆ ಪಡೆದು ದಿನಕ್ಕೆ 4 ಕೋಲ ಸೇವೆ ನೀಡಿದರೂ, ಪ್ರತಿ ಕೋಲದಲ್ಲಿ ಇಬ್ಬರಿಗೆ ಪ್ರಸಾದದಂತೆ 8 ಮಂದಿಗೆ ಪ್ರಸಾದ ನೀಡುವುದಕ್ಕೆ ನಿರ್ಧರಿಸಲಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಕೋಲ ಸೇವೆ ನೀಡಲು ಬುಕ್ಕಿಂಗ್ ಮಾಡಿದವರಿಗೆ ಶೀಘ್ರ ಅವಕಾಶ ಸಿಗಲಿದೆ ಎಂದು ಪಣೋಲಿಬೈಲು ಕ್ಷೇತ್ರದ ಮೂಲಗಳು ತಿಳಿಸಿದೆ.

More from the blog

ಗ್ರಾಮ ಸುಭಿಕ್ಷ ಕಾರ್ಯಕ್ರಮದ ಅಂಗವಾಗಿ ನೆಟ್ಲಾ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಸೀಯಾಳ ಅಭಿಷೇಕ

" ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್( ರಿ ) ಕಲ್ಲಡ್ಕ ವಲಯದ ವತಿಯಿಂದ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘಗಳ ಒಕ್ಕೂಟ, ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯ, ಶೌರ್ಯ ವಿಪತು...

ಕುಡಿಯುವ ನೀರಿನ ಸಮಸ್ಯೆ ಮತ್ತು ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಜಿಲ್ಲಾಧಿಕಾರಿಗಳ ಸಭೆ

ಕುಡಿಯುವ ನೀರಿನ ಸಮಸ್ಯೆ ಮತ್ತು ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸಂಬಂಧಿಸಿದಂತೆ ಮೇ. 03 ರಂದು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆ ಯಲ್ಲಿ ಜರುಗಿದ ಸಭೆಯಲ್ಲಿ ನೀಡಿರುವ ನಿರ್ದೇಶನದ ಮೇರೆಗೆ ಮೇ. 04 ರಂದು...

ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಹಣ್ಣು ಮಾರಾಟ : ಅಪಘಾತದ ಭೀತಿ… ತೆರವಿಗೆ ಆಗ್ರಹ

ಬಂಟ್ವಾಳ: ಅಪಘಾತಕ್ಕೆ ಕಾರಣವಾಗುವ ಸಾಧ್ಯತೆ ಹೆಚ್ಚಾಗಿರುವ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಬೇಸಿಗೆ ಕಾಲದಲ್ಲಿ ಬಹುಬೇಡಿಕೆ ಹೊಂದಿರುವ ಈರೋಳ್ ಮತ್ತು ಹಲಸಿನ ಹಣ್ಣು ಮಾರಾಟ ಮಾಡುವವರನ್ನು ತೆರವು ಮಾಡಿ ಎಂಬ ಒತ್ತಾಯಗಳು ಸಾರ್ವಜನಿಕ ವಲಯದಲ್ಲಿ...

ತೆಕ್ಕಾರು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಳದ ಶಿಲಾನ್ಯಾಸ

ತೆಕ್ಕಾರು: ಭಗವಂತ ನಮ್ಮ ಅಂತರಾಳದಲ್ಲಿದ್ದಾರೆ ಎಂದು ವೇದ, ಉಪನಿಷತ್ತುಗಳು, ಗ್ರಂಥಗಳು ಹೇಳುತ್ತವೆ. ಇದನ್ನು ತಿಳಿಯುವುದು ಕಷ್ಟ ಇದನ್ನು ಇಂದು ತಿಳಿಯಪಡಿಸುವ ಕಾರ್ಯವನ್ನು ಶ್ರದ್ಧಾಕೇಂದ್ರಗಳು ಮಾಡುತ್ತಿವೆ. ಇದಕ್ಕಾಗಿ ಶ್ರದ್ಧಾಕೇಂದ್ರಗಳ ಅಭಿವೃದ್ಧಿಯನ್ನು ನಾವು ಮಾಡಬೇಕು ಎಂದು...