Monday, May 6, 2024

ಅಪರಿಚಿತ ವಾಹನ ಡಿಕ್ಕಿ : ಕಾಡುಹಂದಿ ಸಾವು

ಬಂಟ್ವಾಳ: ಅಪಘಾತಕ್ಕೆ ಒಳಗಾಗಿ ಕಾಡಹಂದಿಯೊಂದು ಸಾವನ್ನಪ್ಪಿದ ಘಟನೆ ಪುಂಜಾಲಕಟ್ಟೆಯಲ್ಲಿ ಮೇ.3 ರಂದು ಶುಕ್ರವಾರ ನಡೆದಿದ್ದು, ತಡವಾಗಿ ಮಾಹಿತಿ ಲಭ್ಯವಾಗಿದೆ.

ಪುಂಜಾಲಕಟ್ಟೆ ಸಮೀಪದ ಎನ್.ಸಿ.ರೊಡ್ ಎಂಬಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಕಾಡುಹಂದಿ ಸ್ಥಳದಲ್ಲಿ ಸಾವನ್ನಪ್ಪಿದೆ.

ಸುಮಾರು 40 ಕೆ.ಜಿ.ತೂಕಹೊಂದಿರುವ ಗಂಡು ಕಾಡು ಹಂದಿ ಗುಡ್ಡದಿಂದ ಇಳಿದು ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿದೆ ಎಂದು ಸ್ಥಳೀಯರು‌ ತಿಳಿಸಿದ್ದಾರೆ.

ಹಂದಿ ಸಾವನ್ನಪ್ಪಿದ ‌ಬಗ್ಗೆ ಇಲ್ಲಿನ ಸ್ಥಳೀಯರು ಬಂಟ್ವಾಳ ಅರಣ್ಯ ಇಲಾಖೆಗೆ ಹಾಗೂ ಪುಂಜಾಲಕಟ್ಟೆ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಬೇಟಿ ನೀಡಿದ ಬಂಟ್ವಾಳ ವಲಯ ಅರಣ್ಯಾಧಿಕಾರಿ ಪ್ರಪುಲ್ ಶೆಟ್ಟಿ ಮೃತ ಕಾಡುಹಂದಿಯನ್ನು ಮರಣೋತ್ತರ ಪರೀಕ್ಷೆಗಾಗಿ ವಗ್ಗ ದಲ್ಲಿರುವ ಪಶುವೈದ್ಯಾಲಯಕ್ಕೆ ಸ್ಥಳಾಂತರ ‌ಮಾಡಿದ್ದಾರೆ.

ಇಲ್ಲಿನ ವೈದ್ಯಾಧಿಕಾರಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

ಸ್ಥಳಕ್ಕೆ ಡಿ.ಆರ್.ಎಫ್.ಅನಿಲ್ ಅರಣ್ಯ ಇಲಾಖಾ ಸಿಬ್ಬಂದಿ ಲಕ್ಮೀನಾರಾಯಣ ಬೇಟಿ ನೀಡಿದ್ದಾರೆ.

More from the blog

ವಿದ್ಯುತ್ ತಂತಿಗೆ ಸಿಲುಕಿ ನವಿಲು ಸಾವು

ಬಂಟ್ವಾಳ: ವಿದ್ಯುತ್ ತಂತಿಗೆ ಸಿಲುಕಿ ನವಿಲು ಮೃತಪಟ್ಟ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ. ನವಿಲು ಮೃತಪಟ್ಟ ಬಗ್ಗೆ ಇಲ್ಲಿನ ರಿಕ್ಷಾ ಚಾಲಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯವರು...

ಕುಕ್ಕಾಜೆ ಕಾಪಿಕಾಡ್ ತಾಜುಲ್ ಉಲಮಾ ಮಸೀದಿ ಸ್ವಲಾತ್ ವಾರ್ಷಿಕ

ಇರಾ ಗ್ರಾಮದ ಕುಕ್ಕಾಜೆ ತಾಜುಲ್ ಉಲಮಾ ಮಸೀದಿಯಲ್ಲಿ ಪ್ರತಿ ವಾರ ನಡೆಸಿಕೊಂಡು ಬರುತ್ತಿರುವ ಸ್ವಲಾತ್ ವಾರ್ಷಿಕವು ಆದಿತ್ಯವಾರ ಮಗ್ರಿಬ್ ನಮಾಝಿನ ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಸಂಯುಕ್ತ ಖಾಝಿ ಅಸಯ್ಯದ್ ಫಝಲ್ ಕೊಯಮ್ಮ...

ನೇತ್ರಾವತಿ ನದಿಯಲ್ಲಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ನಾವೂರ ಎಂಬಲ್ಲಿ ಇಂದು ಸಂಜೆ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಹಾಗೂ...

ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್ : 4 ಬದಲು 8 ಮಂದಿಗೆ ಸೇವೆ ಸಂದಾಯಕ್ಕೆ ಅವಕಾಶ

ಬಂಟ್ವಾಳ: ಕಾರಣೀಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಸುಮಾರು 23 ಸಾವಿರಕ್ಕೂ ಅಧಿಕ ಕೋಲ ಸೇವೆಗಳ ಬುಕ್ಕಿಂಗ್ ಇರುವುದರಿಂದ ಭಕ್ತರಿಗೆ ಶೀಘ್ರ ಸೇವೆ ಸಂದಾಯದ ಅವಕಾಶದ ಹಿನ್ನೆಲೆಯಲ್ಲಿ ಪ್ರತಿ ನಿತ್ಯ ನಡೆಯುತ್ತಿದ್ದ...