ತಿರುವನಂತಪುರಂ: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿರುವ ಬೆನ್ನಲ್ಲೇ, ನೆರೆರಾಜ್ಯ ಕೇರಳದಲ್ಲಿ ನಿಫಾ ವೈರಸ್ ಪತ್ತೆಯಾಗಿದೆ.
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 14 ವರ್ಷದ ಬಾಲಕನಿಗೆ ನಿಫಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಾಕಷ್ಟು ಆತಂಕ ಮೂಡಿಸಿದೆ. ಇನ್ನು ಜಿಲ್ಲೆಯಲ್ಲಿ ನಿಫಾ ವೈರಸ್ ಪತ್ತೆಯಾಗಿರುವುದರಿಂದ ಹೈ ಅಲರ್ಟ್ ಘೋಷಿಸಲಾಗಿದೆ.
ಇನ್ನು ಈ ಕುರಿತು ಕೇರಳ ಆರೋಗ್ಯ ಸಚಿವೆ ವೀಣಾ ಚಾರ್ಜ್ ಪ್ರತಿಕ್ರಿಯೆ ನೀಡಿದ್ದು, 14 ವರ್ಷದ ಬಾಲಕನಲ್ಲಿ ನಿಫಾ ವೈರಸ್ ಪತ್ತೆಯಾಗಿದೆ. ಬಾಲಕನ ಮೊದಲ ಸಂಪರ್ಕಿತರನ್ನು ಪತ್ತೆ ಹಚ್ಚಿ, ಅವರನ್ನೆಲ್ಲಾ ಕ್ವಾರಂಟೈನ್ ಮಾಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಬಾಲಕನ ಮನೆಯವರು ಮಾಸ್ಕ್ ಧರಿಸುವಂತೆ ನಿರ್ದೇಶನ ನೀಡಲಾಗಿದೆ. ಸೋಂಕಿತ ಬಾಲಕನ ಭೇಟಿಗೆ ಯಾರಿಗೂ ಅವಕಾಶ ಕೊಡದೇ ಚಿಕಿತ್ಸೆ ನೀಡಲಾಗಿದೆ.
ಇನ್ನು ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 486 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದೆ. ಆಗಸ್ಟ್ ತಿಂಗಳ ವೇಳೆಗೆ ಡೆಂಗ್ಯೂ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ ನೀಡಿದೆ.