ವಿಟ್ಲ : ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನ ಮಧ್ಯೆ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ನಡೆದಿದೆ.
ಈ ಘಟನೆಯಲ್ಲಿ ದ್ವಿಚಕ್ರ ವಾಹನಕ್ಕೆ ಹಾನಿಯಾಗಿದ್ದು, ಸವಾರ ಸ್ಥಳೀಯ ನಿವಾಸಿ ಮೂಸಂಬಿಲ್ ಗಂಭೀರ ಗಾಯಗೊಂಡಿದ್ದು, ಯುವಕನನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ವಿಟ್ಲದಿಂದ ಮುಡಿಪು ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಮೆದು ಕಡೆ ತೆರಳುತ್ತಿದ್ದ ಆಕ್ಟಿವಾ ನಡುವೆ ಅಪಘಾತ ಸಂಭವಿಸಿದೆ.