Wednesday, August 7, 2024

ಇಲೆಕ್ಟ್ರಿಕ್ ಆಟೋರಿಕ್ಷಾಗಳಿಗೆ ದ.ಕ. ಜಿಲ್ಲೆಯಾದ್ಯಂತ ಸಂಚರಿಸಲು ಅನುಮತಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಲೆಕ್ಟ್ರಿಕ್ ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ಮುಕ್ತವಾಗಿ ಸಂಚರಿಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಆದೇಶಿಸಿದ್ದಾರೆ.

ಈ ನಿಟ್ಟಿನಲ್ಲಿ ಎಲ್ಲ ಆಟೋರಿಕ್ಷಾಗಳೊಂದಿಗೆ ಇ- ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ವಲಯ 1 ರಲ್ಲಿ ನೀಲಿ ಬಣ್ಣದ ಹಾಗೂ ವಲಯ 2 ರಲ್ಲಿ ಹಳದಿ ಬಣ್ಣದ ಸ್ಟಿಕ್ಕರ್

/ ಗುರುತಿನ ಸಂಖ್ಯೆಗಳನ್ನು ಪೊಲೀಸ್ ಇಲಾಖೆಯಿಂದ ಪಡೆದು ಅಂಟಿಸಲು ಜಿಲ್ಲಾಧಿಕಾರಿಗಳ ದಿನಾಂಕ 24-11-2022ರ ಅಧಿಸೂಚನೆ ಮತ್ತು 23-01-2023 ರ ಮಾರ್ಪಾಡು ಅಧಿಸೂಚನೆಯನ್ನು ರದ್ದುಪಡಿಸಲಾಗಿದೆ.

ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಆರ್.ಟಿ.ಓ. ಅಧಿಕಾರಿಗಳಿಗೆ ಆದೇಶಿಸಲಾಗಿದೆ. ಅಲ್ಲದೇ, ಈ ಸಂಬಂಧ ಅವಶ್ಯವಿರುವ ಸೂಚನಾ ಫಲಕಗಳನ್ನು ಅಳವಡಿಸಲು ಮಂಗಳೂರು ನಗರ ಡಿಸಿಪಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಅಧಿಕಾರ ನೀಡಲಾಗಿದೆ.

ಮೋಟಾರು ವಾಹನ ಕಾಯಿದೆಯಂತೆ ಪಾಕಿರ್ಂಗ್ ಸ್ಥಳಗಳನ್ನು ಮತ್ತು ನಿಲುಗಡೆ ನಿಲ್ದಾಣಗಳಿಗೆ ಸ್ಥಳಗಳನ್ನು ನಿರ್ಧರಿಸಲು ಮಂಗಳೂರು ನಗರದಲ್ಲಿ ಮಹಾನಗರಪಾಲಿಕೆ ಆಯುಕ್ತರು ಹಾಗೂ ಇತರೆ ಪ್ರದೇಶಗಳಲ್ಲಿ ಸಂಬಂಧಿಸಿದ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಅಧಿಕಾರ ನೀಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ

More from the blog

ಎಲ್.ಎಲ್.ಬಿ.ಪದವೀಧರ ಯುವಕ ಆತ್ಮಹತ್ಯೆ

ವಿಟ್ಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿ ಸಮೀಪ ಪಟ್ಲಕೋಡಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮಾಣಿ ಪಟ್ಲಕೋಡಿ ನಿವಾಸಿ ತಿಲಕ್‌ ಪೂಜಾರಿ (34) ಎಂದು ಗುರುತಿಸಲಾಗಿದೆ. ತಿಲಕ್‌ ಪೂಜಾರಿ ಅವಿವಾಹಿತರಾಗಿದ್ದು,...

ಗುಡ್ಡೆಯಂಗಡಿ ಹಾಲು ಉತ್ಪಾದಕರ ಸಹಕಾರ ಸಂಘ (ನಿ,) ಇದರ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಸತತ ನಾಲ್ಕನೇ ಬಾರಿಗೆ ನಂದರಾಮ ರೈ ಆಯ್ಕೆ

ಗುಡ್ಡೆಯಂಗಡಿ ಹಾಲು ಉತ್ಪಾದಕಾರ ಸಹಕಾರ ಸಂಘ ನಿ, ಗುಡ್ಡೆಯಂಗಡಿ, ಬಂಟ್ವಾಳ ತಾಲೂಕು ಇದರ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಸತತವಾಗಿ ನಾಲ್ಕನೇ ಬಾರಿಗೆ ಅವಿರೋಧವಾಗಿ ಬಂಟ್ವಾಳ ತಾಲೂಕು ಬಡಗಬೆಳ್ಳೂರು ಗ್ರಾಮದ ಅಂಬೋಡಿಮಾರ್ ನಂದಪ್ಪ ರೈ...

ಹಿಂದೂ‌ ಸಂಘಟನೆಯ ಕಾರ್ಯಕರ್ತರ ನಡುವೆ ಹೊಡೆದಾಟ: ಮೂವರು ಆಸ್ಪತ್ರೆಗೆ ದಾಖಲು

ಬಂಟ್ವಾಳ: ಹಿಂದೂ ಸಂಘಟನೆಯ ಯುವಕರ ವೈಯಕ್ತಿಕ ವಿಚಾರವಾಗಿ ನಡೆದ ಹೊಡೆದಾಟ ನಡೆದು ಚೂರಿಯಿಂದ ಇರಿಯುವ ಮೂಲಕ ಕೊನೆಗೊಂಡಿದೆ. ಬಿಸಿರೋಡಿನ ಹಿಂದೂ ಸಂಘಟನೆಯ ಯುವಕರ ತಂಡ ಹಾಗೂ ಬಂಟ್ವಾಳ ಹಿಂದೂ‌ಸಂಘಟನೆಯ ಯುವಕರ ತಂಡದ ನಡುವೆ ನಡೆದ...

ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿ ಹಾನಿಗೀಡಾದ ಮತ್ತು ಜಲಾವೃತಗೊಂಡ ಮನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಬಂಟ್ವಾಳ: ಪಾಕೃತಿಕ ವಿಕೋಪಕ್ಕೆ ತುತ್ತಾಗಿ ಹಾನಿಗೀಡಾದ ಮತ್ತು ನೆರೆಗೆ ನೇತ್ರಾವತಿ ನದಿ ತೀರದ ತಗ್ಗು ಪ್ರದೇಶಗಳು ಜಲಾವೃತಗೊಂಡ ಮನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಬೇಟಿ ನೀಡಿ, ಸಂತ್ರಸ್ತರ ಸಮಸ್ಯರ...