ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಇದ್ದಕಿದ್ದಂತೆ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ಅಡ್ಯಾರ್ ಸಹ್ಯಾದ್ರಿ ಕಾಲೇಜು ಬಳಿ ಸಂಭವಿಸಿದೆ.
ಶನಿವಾರ ಮಧ್ಯಾಹ್ನದ ಹೊತ್ತಿಗೆ ಘಟನೆ ಸಂಭವಿಸಿದ್ದು ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಕಾರು ಚಾಲಕ ಕಾರನ್ನು ನಿಲ್ಲಿಸಿದ್ದು ಕೂಡಲೇ ಕಾರಿನಲ್ಲಿದ್ದವರು ಹೊರ ಬಂದು ಜೀವ ಉಳಿಸಿಕೊಂಡಿದ್ದಾರೆ.
ಬೆಂಕಿ ಅವಘಡದಿಂದ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಕಿ ಅವಘಡಕ್ಕೆ ಕಾರಣ ಏನೆಂದು ತಿಳಿದು ಬಂದಿಲ್ಲ