ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡು ಕಾರೊಂದು ಚರಂಡಿಗೆ ಬಿದ್ದು ಚಾಲಕ ಸೇರಿದಂತೆ ಮೂವರು ಗಾಯಗೊಂಡ ಘಟನೆ ಜಕ್ರಿ ಬೆಟ್ಟು ಮಣ್ಣಾಪು ಎಂಬಲ್ಲಿ ಇಂದು ಸಂಜೆ ನಡೆದಿದೆ.
ಘಟನೆಯಲ್ಲಿ ಕೇರಳ ನಿವಾಸಿಗಳಾದ ಅರುಣ್, ಪ್ರಮೋದ್ ಮತ್ತು ಅರುಣ್ ಎಂಬವರು ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಹೊರರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಸಂಜೆ 4:30 ಸುಮಾರಿಗೆ ಅಪಘಾತವಾಗಿದ್ದು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು,ಘಟನೆಯಲ್ಲಿ ಆಟೋ ಕಾರು ಸಂಪೂರ್ಣ ಜಕ್ಕಮ್ಮಾಗಿದ್ದು ಸ್ಥಳೀಯ ನಿವಾಸಿಯಾದ ಸಂಜೀವ ಮೂಲ್ಯ ಕಾಂಪೌಂಡ್ ಡ್ಯಾಮೇಜ್ ಆಗಿದೆ.
ಸ್ಥಳಕ್ಕೆ ಆಗಮಿಸಿದ ಟ್ರಾಫಿಕ್ ಪೊಲೀಸರು ಚಾಲಕನ ಬಗ್ಗೆ ಮಾಹಿತಿ ಪಡೆದು ವಿಚಾರಿಸಿದಾಗ ಆತ
ಅಮಲು ಪದಾರ್ಥ ಸೇವಿಸಿ ಅಜಾಗರೂಕತೆಯಿಂದ ಚಾಲನೆ ಮಾಡಿರುವುದು ಸಾಬೀತಾಗಿದೆ.
ಹಾಗಾಗಿ ಡ್ರಿಂಕ್ ಎಂಡ್ ಡ್ರೈವ್ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಟ್ರಾಫಿಕ್ ಎಸ್.ಐ.ಸುತೇಶ್ ತಿಳಿಸಿದ್ದಾರೆ.
ಚಿಕ್ಕಮಗಳೂರು ಕಡೆಯಿಂದ ಕೇರಳಕ್ಕೆ ಹೋಗುವ ಸಂದರ್ಭದಲ್ಲಿ ಅತೀ ವೇಗವಾಗಿ ಚಾಲನೆಯ ಪರಿಣಾಮವಾಗಿ ನಿಯಂತ್ರಣ ಕಳೆದುಕೊಂಡು ಚರಂಡಿಗೆ ಬಿದ್ದಿದೆ.