Wednesday, October 2, 2024

ಕಾರಿನಡಿಗೆ ಬಿದ್ದು ಬಾಲಕ ಮೃತ್ಯು

ಪುತ್ತೂರು: ಕೊಕ್ಕಡದಲ್ಲಿ ಮನೆಯೊಂದರ ಅಂಗಳದಲ್ಲಿ ಕಾರೊಂದನ್ನು ಹಿಂದಕ್ಕೆ ಚಲಾಯಿಸುತ್ತಿದ್ದ ವೇಳೆ ಬಾಲಕನೋರ್ವ ಕಾರಿನಡಿಗೆ ಬಿದ್ದು ಮೃತಪಟ್ಟ ಘಟನೆ ಅ.1ರಂದು ನಡೆದ ಬಗ್ಗೆ ವರದಿಯಾಗಿದೆ.

ಕೊಕ್ಕಡದ ಹಮೀದ್ ಎಂಬವರ 10 ವರ್ಷ ಪ್ರಾಯದ ಪುತ್ರ ನವಾಫ್ ಮೃತಪಟ್ಟವರು.ಹಮೀದ್ ಅವರ ಮನೆಗೆ ಬಂದಿದ್ದ ಸಂಬಂಧಿಕರು ಮನೆಯಂಗಳದಲ್ಲಿ ಕಾರನ್ನು ಹಿಂದಕ್ಕೆ ಚಲಾಯಿಸಿದಾಗ ಕಾರಿನ ಹಿಂಬದಿ ನಿಂತಿದ್ದ ನವಾಫ್ ಅವರು ಕಾರಿನಡಿಗೆ ಬಿದ್ದರು ಎನ್ನಲಾಗಿದೆ.

 

ಅವರ ಮೇಲೆಯೇ ಕಾರು ಹರಿದ ಪರಿಣಾಮ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿ ಮೃತಪಟ್ಡಿದ್ದಾರೆ.

 

ನವಾಫ್ ಅವರು ಕಾರಿನ ಹಿಂಬದಿ ನಿಂತಿದ್ದದ್ದು ಅರಿವಿಗೆ ಬಾರದೆ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.ಮೃತ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರ ಕೊಠಡಿಯಲ್ಲಿರಿಸಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

More from the blog

ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಶ್ರದ್ದಾಂಜಲಿ ಸಭೆ

ಸಾರ್ವಜನಿಕ ಸೇವೆಯಲ್ಲಿರುವ ವ್ಯಕ್ತಿಗಳು ವೃತ್ತಿ ನಿಷ್ಠೆಯೊಂದಿಗೆ ಸಮಾಜದ ಎಲ್ಲಾ ವರ್ಗದ ಜನರೊಂದಿಗೆ ಸಮಾನತೆಯಿಂದ ಬೆರೆತುಕೊಂಡಾಗ ನಿರಂತರವಾಗಿ ಹೆಸರು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ...

ಕೆಲಿಂಜ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಬಿ ತಿಮ್ಮಪ್ಪ ನಾಯ್ಕ ರಿಗೆ ಅಭಿನಂದನಾ ಕಾರ್ಯಕ್ರಮ

ಶಾಲಾಭಿವೃದ್ದಿ‌ ಸಮಿತಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಹಿರಿಯ ಪ್ರಾಥಮಿಕ ವಿಭಾಗದ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಕೆಲಿಂಜ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಬಿ ತಿಮ್ಮಪ್ಪ ನಾಯ್ಕ ಇವರಿಗೆ...

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆಲುವು ನಿಶ್ಚಿತ -ನಳಿನ್‌ಕುಮಾರ್ ಕಟೀಲ್ ವಿಶ್ವಾಸ

ಮಂಗಳೂರು : ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ , ಯುವ ನಾಯಕ ಕಿಶೋರ್ ಕುಮಾರ್ ಪುತ್ತೂರು ಸ್ಪರ್ಧಿಸಲಿದ್ದು ,...

ಡೇಂಜರ್ ಬ್ಲ್ಯಾಕ್ ಸ್ಮೋಕ್ ? ಬ್ರೇಕ್ ಹಾಕುವ ಅಧಿಕಾರಿಗಳೇ ಇತ್ತ ಚಿತ್ತ ಹರಿಸಿ…….

ಬಂಟ್ವಾಳ: ಕಾರ್ಖಾನೆಯಿಂದ ಹೊರ ಸೂಸುವ ಬ್ಲಾಕ್ ಸ್ಮೋಕ್ ನ ರೀತಿಯಲ್ಲಿ ಸರಕಾರಿ ಬಸ್ಸೊಂದರಿಂದ ಹೊಗೆಯಾಡುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಮಂಗಳೂರು ವಿಭಾಗ (3) ಕ್ಕೆ ಸೇರಿದ ಧರ್ಮಸ್ಥಳ ಮಂಗಳೂರು ಓಡಾಟ ನಡೆಸುವ ಕೆ.ಎಸ್....