ಬಂಟ್ವಾಳ: ಕೋಟ ಶ್ರೀನಿವಾಸ ಪೂಜಾರಿ ಅವರ ತೆರವಾದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಭಂಡಾರಿ ಬೊಟ್ಯಾಡಿ ಅವರನ್ನು ಘೋಷಣೆ ಮಾಡಲಾಗಿದೆ.
ಯುವಮೋರ್ಚಾ ಜಿಲ್ಲಾಧ್ಯಕ್ಷನಾಗಿ ಮಿಂಚಿದ ಇವರು ಪರಿವಾರ ಸಂಘಟನೆಯಲ್ಲಿ ಮುಂಚೂಣಿಯ ನಾಯಕನಾಗಿ ಸೇವೆ ಸಲ್ಲಿಸಿದ್ದಾರೆ.
ಅತೀ ಕಡಿಮೆ ಜನಸಂಖ್ಯೆ ಇರುವ ಭಂಡಾರಿ ಸಮುದಾಯವನ್ನು ಗುರುತಿಸಿ ಈ ಬಾರಿ ಬಿಜೆಪಿ ಟಿಕೆಟ್ ನೀಡುವ ಮೂಲಕ ಕೆಲ ಸಮುದಾಯಕ್ಕೆ ಮನ್ನಣೆ ನೀಡಿರುವ ಬಿಜೆಪಿ ನಡೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಪ್ರಸ್ತುತ ದಿನಗಳಲ್ಲಿ ರಾಜಕೀಯ ಪಕ್ಷಗಳು ಅಭ್ಯರ್ಥಿಯ ಆಯ್ಕೆಯ ಸಂದರ್ಭದಲ್ಲಿ ಜಾತಿಗಳನ್ನು ನೋಡಿಕೊಂಡು ದೊಡ್ಡ ಸಮುದಾಯಗಳಿಗೆ ಮಣೆ ಹಾಕುತ್ತಿದೆಎಂಬ ಆರೋಪ ಕೇಳಿ ಬರುತ್ತಿತ್ತು.ಆದರೆ ಪ್ರಸ್ತುತ ಬಿಜೆಪಿ ಯ ಈ ಅಚ್ಚರಿ ಯ ಆಯ್ಕೆಯಿಂದ ಅಂತಹದೊಂದು ಆರೋಪಕ್ಕೆ ತಕ್ಕ ಉತ್ತರ ನೀಡಿದಂತಾಗಿದೆ.
ಈ ಬಾರಿ ಎಂ.ಎಲ್.ಸಿ.ಚುನಾವಣೆಗೆ ಪ್ರಬಲ ಸಮುದಾಯಗಳಾದ ಬಂಟ ಸಮಾಜದ ನಳಿನ್ ಕುಮಾರ್ ಕಟೀಲು ಹಾಗೂ ಮೊಗವೀರ ಸಮಾಜದ ಪ್ರಮೋದ್ ಮದ್ವರಾಜ್ , ಬಿಲ್ಲವ ಸಮುದಾಯದ ಸತೀಶ್ ಸುವರ್ಣ ಹಾಗೂ ಗೀತಾಂಜಲಿ ಸುವರ್ಣ ಅವರ ಹೆಸರುಗಳು ಕೇಳಿ ಬಂದಿತ್ತು.