Friday, October 4, 2024

ಮಂಗಳೂರು ಕೆಎಸ್‌ಆರ್‌ಟಿಸಿಯಿಂದ ದಸರಾ ಪ್ರವಾಸ ಪ್ಯಾಕೇಜ್‌

ಮಂಗಳೂರು: ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗವು ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಮುರ್ಡೇಶ್ವರ ವಿಶೇಷ ಪ್ಯಾಕೇಜ್‌ ಪ್ರವಾಸವನ್ನು ಅ. 3ರಿಂದ 12ರ ವರೆಗೆ ಹಮ್ಮಿಕೊಳ್ಳಲಿದೆ.

ಮಂಗಳೂರು ಬಸ್‌ ನಿಲ್ದಾಣದಿಂದ ಶ್ರೀ ಮಂಗಳಾದೇವಿ ದೇವಸ್ಥಾನ-ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ-ಶ್ರೀ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ – ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ (ಮಧ್ಯಾಹ್ನದ ಊಟ) – ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನ ಹಾಗೂ ಬೀಚ್‌ – ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ- ಶ್ರೀ ಉರ್ವ ಮಾರಿಯಮ್ಮ ದೇವಸ್ಥಾನ (ಸಂಜೆ ಉಪಹಾರ)- ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ, ನವದುರ್ಗಾ ದರ್ಶನ – ಮಂಗಳೂರು ಬಸ್‌ ನಿಲ್ದಾಣ.

ವಯಸ್ಕರಿಗೆ 400 ರೂ., ಮಕ್ಕಳಿಗೆ (6 ವರ್ಷದಿಂದ 12 ವರ್ಷದವರಿಗೆ) 300 ರೂ. (ಬೆಳಗ್ಗೆ 8 ಗಂಟೆಗೆ ಹೊರಟು ರಾತ್ರಿ 8.30ಕ್ಕೆ ಮಂಗಳೂರು ಬಸ್‌ ನಿಲ್ದಾಣ)

ಮಂಗಳೂರು- ಮಡಿಕೇರಿ-ರಾಜಾಸೀಟ್‌- ಅಬ್ಬಿಫಾಲ್ಸ್‌ -ನಿಸರ್ಗ ಧಾಮ- ಗೋಲ್ಡನ್‌ ಟೆಂಪಲ್‌-ಮಂಗಳೂರು ಬಸ್‌ ನಿಲ್ದಾಣ.

ವಯಸ್ಕರಿಗೆ 500 ರೂ. ಮಕ್ಕಳಿಗೆ (6ವರ್ಷದಿಂದ 12 ವರ್ಷದವರಿಗೆ) 400 ರೂ. ಬೆಳಗ್ಗೆ 7 ಗಂಟೆಗೆ ಹೊರಟು ರಾತ್ರಿ 9ಕ್ಕೆ ಮಂಗಳೂರು ಬಸ್‌ ನಿಲ್ದಾಣ.

ಮಂಗಳೂರು-ಕೊಲ್ಲೂರು

ಮಂಗಳೂರು ಬಸ್‌ ನಿಲ್ದಾಣ -ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ-ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ (ಮಧ್ಯಾಹ್ನದ ಊಟ) – ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ- ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ-ಮಂಗಳೂರು ಬಸ್‌ ನಿಲ್ದಾಣ.

ವಯಸ್ಕರಿಗೆ 500, ಮಕ್ಕಳಿಗೆ 400 ರೂ. ಬೆಳಗ್ಗೆ 8 ಗಂಟೆಗೆ ಹೊರಟು ರಾತ್ರಿ 7ಕ್ಕೆ ಮಂಗಳೂರು ಬಸ್‌ ನಿಲ್ದಾಣ.

ಮಂಗಳೂರು-ಮುರ್ಡೇಶ್ವರ

ಮಂಗಳೂರು ಬಸ್‌ ನಿಲ್ದಾಣ – ಮುರ್ಡೇಶ್ವರ ದೇವಸ್ಥಾನ – ಚಂಡಿಕಾ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕುಂಭಾಶಿ – ಆನೆಗುಡ್ಡೆ ಗಣಪತಿ ದೇವಸ್ಥಾನ ಕುಂಭಾಶಿ – ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ – ಮಂಗಳೂರು ಬಸ್‌ ನಿಲ್ದಾಣ.

ವಯಸ್ಕರಿಗೆ 550, ಮಕ್ಕಳಿಗೆ 450 ರೂ. ಬೆಳಗ್ಗೆ 7 ಗಂಟೆಗೆ ಹೊರಟು ರಾತ್ರಿ 7ಕ್ಕೆ ಮಂಗಳೂರು ಬಸ್‌ ನಿಲ್ದಾಣ.

ಮಾಹಿತಿಗೆ 7760990720 ಸಂಪರ್ಕಿಸಬಹುದು. ಈ ಪ್ಯಾಕೇಜ್‌ಗಳಿಗೆ www.ksrtc.in ಮೂಲಕ ಮುಂಗಡ ಆಸನ ಕಾಯ್ದಿರಿಸಬಹುದಾಗಿದೆ.

More from the blog

ದಸರಾ ಹಬ್ಬ : ದುಬಾರಿ ಆಯ್ತು ಬಸ್​ ಟಿಕೆಟ್ ದರ

ಮಂಗಳೂರು: ದಸರಾ ಹಬ್ಬ ಸಮೀಪಿಸುತ್ತಿರುವ ಹೊತ್ತಿನಲ್ಲಿ ಖಾಸಗಿ ಬಸ್‌ಗಳ ಪ್ರಯಾಣ ದರ ದುಪ್ಪಟ್ಟಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸು ವವರಿಗೆ ಖಾಸಗಿ ಬಸ್‌ನಲ್ಲಿ ಅತೀ ಹೆಚ್ಚಿನ ದರ 3,500 ರೂ. ಇದೆ. ಮಂಗಳೂರು ದಸರಾ ಕಣ್ತುಂಬಿಕೊಳ್ಳಲು...

ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಭಂಡಾರಿ ಬೊಟ್ಯಾಡಿ ಫೈನಲ್…..

ಬಂಟ್ವಾಳ: ಕೋಟ ಶ್ರೀನಿವಾಸ ಪೂಜಾರಿ ಅವರ ತೆರವಾದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಭಂಡಾರಿ ಬೊಟ್ಯಾಡಿ ಅವರನ್ನು ಘೋಷಣೆ ಮಾಡಲಾಗಿದೆ. ಯುವಮೋರ್ಚಾ ಜಿಲ್ಲಾಧ್ಯಕ್ಷನಾಗಿ ಮಿಂಚಿದ ಇವರು...

ಡ್ರಿಂಕ್ ಆಂಡ್ ಡ್ರೈವ್: ಕಾರು ಚರಂಡಿಗೆ,ಮೂವರಿಗೆ ಗಾಯ….

ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡು ಕಾರೊಂದು ಚರಂಡಿಗೆ ಬಿದ್ದು ಚಾಲಕ ಸೇರಿದಂತೆ ಮೂವರು ಗಾಯಗೊಂಡ ಘಟನೆ ಜಕ್ರಿ ಬೆಟ್ಟು ಮಣ್ಣಾಪು ಎಂಬಲ್ಲಿ ಇಂದು ಸಂಜೆ ನಡೆದಿದೆ. ಘಟನೆಯಲ್ಲಿ ಕೇರಳ ನಿವಾಸಿಗಳಾದ ಅರುಣ್, ಪ್ರಮೋದ್ ಮತ್ತು...

ವಿಧಾನ ಪರಿಷತ್ ( MLC ) ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಜಿ.ಪಂ.ಮಾಜಿ‌ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಸ್ಪರ್ಧೆ ಬಹುತೇಕ ಖಚಿತ…..

ಬಂಟ್ವಾಳ: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಒಮ್ಮತದ ಅಭ್ಯರ್ಥಿಯಾಗಿ ದ.ಕ.ಜಿಲ್ಲೆಯ ಯುವ ಸಮರ್ಥ ನಾಯಕನಾಗಿರುವ ಯುವಕರ ಕಣ್ಮಣಿಯಾಗಿರುವ ಜಿ.ಪಂ.ನ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆಯವರು ಸ್ಪರ್ಧೆ ಮಾಡುವುದು ಬಹುತೇಕ...