ಬಂಟ್ವಾಳ: ರಾಷ್ಟ್ರೀಯ ಸ್ವಯಂಸೇವಕ ಸಂಘ ಮಂಗಳೂರು ಗ್ರಾಮಾಂತರ ಜಿಲ್ಲೆ ಇದರ ವಿಜಯದಶಮಿ ಪಥಸಂಚಲನ ಅ. 20 ರಂದು ಆದಿತ್ಯವಾರ ಬೆಳಿಗ್ಗೆ 8.00 ಗಂಟೆಗೆ ಬಿಸಿರೋಡಿನಲ್ಲಿ ನಡೆಯಿತು.
ಬಿಸಿರೋಡಿನ ಸ್ಪರ್ಶ ಕಲಾ ಮಂದಿರದ ಬಳಿಯಿಂದ ಬಿಸಿರೋಡಿನ ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣದವರೆಗೆ ಬಂದು ಅಲ್ಲಿಂದ ತಿರುಗಿ ವಾಪಾಸು ಸ್ಪರ್ಶಾ ಕಲಾಮಂದಿರದಲ್ಲಿ ಸಮಾಪನಗೊಂಡಿತು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂಸೇವಕರು, ಸಂಘಪರಿವಾರದ ಕಾರ್ಯಕರ್ತರು, ಪಕ್ಷದ ಮಂಡಲ ಪದಾಧಿಕಾರಿಗಳು,ಮಹಾಶಕ್ತಿ ಕೇಂದ್ರದ ಪ್ರಮುಖರು, ವಿವಿಧ ಮೋರ್ಚಾಗಳ ಪ್ರಮುಖರು, ಜನಪ್ರತಿನಿಧಿಗಳು, ವಿವಿಧ ಜವಾಬ್ದಾರಿ ಹೊಂದಿರುವ ಪ್ರಮುಖರು ಪಥ ಸಂಚಲನದಲ್ಲಿ ಭಾಗವಹಿಸಿದರು.