Sunday, October 6, 2024

ವಿಧಾನ ಪರಿಷತ್‌ ಸ್ಥಾನದ ಉಪ ಚುನಾವಣೆ : ಜನಪ್ರತಿನಿಧಿಗಳ ಸಭೆ

ವಿಧಾನ ಪರಿಷತ್‌ ಸ್ಥಾನದ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಯಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟ ಜನಪ್ರತಿನಿಧಿಗಳ ಸಭೆ ನಡೆಯಿತು.

ಸಭೆಯನ್ನು ಉದ್ಧೇಶಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ, ಕಿಶೋರ್ ಕುಮಾರ್ ಅವರಿಂದ ಪಕ್ಷ ಚಟುವಟಿಕೆಯಲ್ಲಿ ಪ್ರೇರಣೆ ಪಡೆದವರಲ್ಲಿ ನಾನೂ ಒಬ್ಬ ಎಂಬ ಹೆಮ್ಮೆಯಿದೆ. ವಿವಿಧ ಚುನಾವಣೆಗಳಲ್ಲಿ ಬೂತ ಮಟ್ಟದಿಂದ ರಾಜ್ಯ ಮಟ್ಟದ ವರೆಗೆ ಸಂಘಟನಾ ಚಟುವಟಿಕೆಯ ಅನುಭವವಿರುವ ಕಿಶೋರ್ ಕುಮಾರ್ ಅವರನ್ನು ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿಯು ಪಕ್ಷ ಸಂಘಟನೆ, ಚಟುವಟಿಕೆಗಳನ್ನು ಗೌರವಿಸುವ ನಿಟ್ಟಿನಲ್ಲಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ಇದು ನಮ್ಮೆಲ್ಲರಿಗೂ ಹೆಮ್ಮೆಯ ವಿಚಾರವಾಗಿದೆ. ಅವರನ್ನು ವಿಧಾನ ಪರಿಷತ್ತಿಗೆ ಗೆಲ್ಲಿಸಿ ಕಳಿಸಿಕೊಡುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ಹೇಳಿದರು.

 

ಮಾಜಿ ವಿಧಾನ ಪರಿಷತ್ ಸದಸ್ಯರಾದ ಕ್ಯಾ. ಗಣೇಶ್ ಕಾರ್ಣಿಕ್ ಮಾತನಾಡಿ, ಪಕ್ಷದ ಅನೇಕ ಜವಬ್ದಾರಿಗಳನ್ನು ಹೊತ್ತು ಯಶಸ್ವಿಯಾಗಿರುವ ಕಿಶೋರ್ ಕುಮಾರ್ ಅವರು ಜನ‌ಸೇವೆಯಲ್ಲಿಯೂ ಅದೇ ಬದ್ಧತೆ ಪ್ರದರ್ಶಿಸುತ್ತಾರೆ. ವಿಧಾನ ಪರಿಷತ್ತಿನಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಧ್ವನಿಯಾಗುತ್ತಾರೆ ಎಂದು ಹೇಳಿದರು.

ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು, ಕಿಶೋರ್ ಕುಮಾರ್ ಪುತ್ತೂರು ಅವರ ಗೆಲುವು ನಿಶ್ಚಿತವಾಗಿದೆ. ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಸೋಲೊಪ್ಪಿಕೊಳ್ಳುವ ವಾತಾವರಣ ನಿರ್ಮಾಣ ವಾಗಿದ್ದು ಬಿಜೆಪಿಯ ಗೆಲುವು ನಿರ್ಧಾರವಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ, ಮಂಡಲ ಅಧ್ಯಕ್ಷರಾದ ರಮೇಶ್ ಕಂಡೆಟ್ಚು, ಉಪ ಮೇಯರ್ ಭಾನುಮತಿ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ಇನ್ನಿತರ ಪ್ರಮುಖರು ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರು ಉಪಸ್ಥಿತರಿದ್ದರು.

More from the blog

ರಾಮ್ ಸೇನಾ ವಾಯುಪುತ್ರ ಘಟಕ ಕುಪ್ಪೆಪದವು ಇವರಿಂದ ವಿನೂತನ ಶೈಲಿಯ ಸಮಾಜ ಸೇವೆ

ರಾಮ್ ಸೇನಾ ವಾಯುಪುತ್ರ ಘಟಕ ಕುಪ್ಪೆಪದವು ಇದರ ವತಿಯಿಂದ ಅಶಕ್ತರ ಚಿಕಿತ್ಸಾ ವೆಚ್ಚಕ್ಕಾಗಿ ಒಂದು ವಿಷೇಶವಾದ ಪ್ರಯತ್ನ ಕೈಕೊಂಡು ವಿಭಿನ್ನ ವೇಷ ಧರಿಸಿ 3 ನೇ ವರ್ಷದ ಭವತಿ ಭಿಕ್ಷಾಂದೇಹಿ ಎಂಬ ಪುಣ್ಯ...

ಗಾಂಧಿಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ಸಭಾ ಕಾರ್ಯಕ್ರಮ

ಬಂಟ್ವಾಳ: ಶ್ರೀ ಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ (ರಿ.) ಬಂಟ್ವಾಳ ತಾಲೂಕು, ಅಖಿಲ ಕರ್ನಾಟಕ ವಲಯ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬಂಟ್ವಾಳ ತಾಲೂಕು ಇದರ ಆಶ್ರಯದಲ್ಲಿ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು...

ವಾಹನ ತಪಾಸಣೆ ವೇಳೆ ಕಳವಾದ ಸ್ಕೂಟರ್‌ ಪತ್ತೆ : ಆರೋಪಿ ಅರೆಸ್ಟ್

ಬಂಟ್ವಾಳ: ಬಂಟ್ವಾಳ ನಗರ ಪೊಲೀಸರು ಬಿಸಿರೋಡಿನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಸ್ಕೂಟರೊಂದನ್ನು ತಡೆದು ವಿಚಾರಿಸಿದಾಗ ಅದು ಮೆಲ್ಕಾರಿನಿಂದ ಕಳವು ಮಾಡಿದ ಸ್ಕೂಟರ್ ಎಂದು ತಿಳಿದುಬಂದಿದ್ದು, ಆರೋಪಿ ಸವಾರನನ್ನು ಪೊಲೀಸರು ಬಂಧಿಸಿದ್ದಾರೆ. ನಾವೂರು ಗ್ರಾಮದ...

ಸಂಚಾರ ಪೊಲೀಸ್ ಠಾಣೆಗೆ ಬ್ಯಾರಿಕೇಡ್ ಹಸ್ತಾಂತರ

ಬಂಟ್ವಾಳ : ಸಂಚಾರ ಪೋಲೀಸ್ ಠಾಣೆಗೆ ರೋಟರಿ ಕ್ಲಬ್ ಬಂಟ್ವಾಳ ಲೋರೆಟ್ಟೊ ಹಿಲ್ಸ್ ಕ್ಲಬ್ ನ ವತಿಯಿಂದ ಬ್ಯಾರಿಕೇಡ್ ನ್ನು ಹಸ್ತಾಂತರ ಮಾಡಿದರು. ಲೊರೆಟ್ಟೋ ಚರ್ಚ್ ನ ಮುಂಭಾಗದಲ್ಲಿ ಹಾದು ಹೋಗುವ ಬಿಸಿರೋಡು- ಮೂಡಬಿದಿರೆ...