ಬಂಟ್ವಾಳ: ಮನೆಯ ಸಿಟೌಟ್ ನಲ್ಲಿ ಕುಳಿತ್ತಿದ್ದ ಬಾಲಕನೋರ್ವ ಸಿಡಿಲು ಬಡಿದು ಮೃತಪಟ್ಟ ಘಟನೆ ರವಿವಾರ ಸಂಜೆ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಗಡಿಯಾರದಲ್ಲಿ ನಡೆದಿದೆ.
ಗಡಿಯಾರ ನಿವಾಸಿ ಚಂದ್ರಹಾಸ ಅವರ ಪುತ್ರ ಸುಭೋದ್ ಸಿ.(೧೪) ಮೃತಪಟ್ಟ ಬಾಲಕ. ಆತ ರವಿವಾರ ಸಂಜೆ ೫ರ ಸುಮಾರಿಗೆ ಮನೆಯ ಸಿಟೌಟ್ ನಲ್ಲಿ ಕುಳಿತ್ತಿದ್ದ ಆ ವೇಳೆ ಏಕಾಏಕಿ ಸಿಡಿಲು ಬಡಿದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಬಾಲಕನನ್ನು ತಕ್ಷಣ ಮಾಣಿ ಆರೋಗ್ಯ ಕೇಂದ್ರಕ್ಕೆ ತಂದು ಬಳಿಕ ಪುತ್ತೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ಆತ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆ ಕೊಂಡು ಹೋಗಿದ್ದು, ಮರಣೋತ್ತರ ಪರೀಕ್ಷೆ ನಡೆಯಬೇಕಿದೆ. ಬಂಟ್ವಾಳ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.