ಬಂಟ್ವಾಳ: ಅಡಿಕೆ ಮರ ಹತ್ತಿ ಅಡಿಕೆ ಕೀಳುತ್ತಿದ್ದ ಕಾರ್ಮಿಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ಮರದಿಂದ ಬಿದ್ದು ಮೃತಪಟ್ಟ ಘಟನೆ ಪಾಣೆಮಂಗಳೂರಿನ ಬೋಳಂಗಡಿಯಲ್ಲಿ ನಡೆದಿದೆ.
ಬೋಳಂಗಡಿ ಮಜಲ್ ಮನೆ ನಿವಾಸಿ ಜೋನ್ ಲೋಬೊ ಮೃತಪಟ್ಟ ಕಾರ್ಮಿಕ.
ಅವರು ನ. ೧೩ರಂದು ಬೋಳಂಗಡಿ ಪದ್ಮನಾಭ ಪ್ರಭು ಅವರ ತೋಟದಲ್ಲಿ ಅಡಿಕೆ ಕೀಳುತ್ತಿದ್ದ ಸಂದರ್ಭದಲ್ಲಿ ಅಡಿಕೆ ಮರದಿಂದ ಬಿದ್ದಿದ್ದಾರೆ. ತಕ್ಷಣ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಪತ್ನಿ ಸ್ವಪ್ನ ವಿ.ಎಂ.ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.