ಬಂಟ್ವಾಳ: ಬಂಟ್ವಾಳ ಪುರಸಭೆಯಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ಹಾಗೂ ಗ್ರಾ.ಪಂ.ಗಳಲ್ಲಿ ತೆರವಾದ 11 ಸ್ಥಾನಗಳಿಗೆ ನ. 23ರಂದು (ಇಂದು) ಬಿರುಸಿನ ಮತದಾನ ನಡೆಯುತ್ತಿದೆ.
ವಿವಿಧ ಕಾರಣಗಳಿಗೆ ತೆರವಾದ ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಅತ್ಯಂತ ಶಾಂತಿಯುತವಾಗಿ ನಡೆಯುತ್ತಿದೆ.
ಶಾಂತಿಯುತ ಮತದಾನದ ದೃಷ್ಟಿಯಿಂದ ಮತದಾನ ನಡೆಯುವ ಬೂತ್ ಗಳ ಸುತ್ತ ಹೆಚ್ಚುವರಿ ಪೋಲೀಸ್ ತಂಡ ಕಾರ್ಯ ನಿರ್ವಹಿಸುತ್ತಿದ್ದು, ಸರ್ಕಲ್ ಪೋಲೀಸ್ ಇನ್ಸ್ ಪೆಕ್ಟರ್ ಸಹಿತ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ಪೋಲೀಸ್ ಅಧಿಕಾರಿಗಳು ರೌಂಡ್ಸ್ ನಲ್ಲಿ ತೊಡಗಿಸಿಕೊಂಡಿದ್ದಾರೆ.