Tuesday, November 19, 2024

18ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನ

ಬಂಟ್ವಾಳ: ಮಕ್ಕಳ‌ಲ್ಲಿರುವ ಪ್ರತಿಭೆಯನ್ನು ಗುರುಸಿ‌ ಪ್ರೋತ್ಸಾಸಲು ಇಂತಹ ಸಾಹಿತ್ಯ ಸಮ್ಮೇಳನಗಳು ಬೇಕು ಎಂದು ಬಂಟ್ವಾಳ ತಾಲೂಕು 18 ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನ ದ ಅಧ್ಯಕ್ಷೆ ಶಂಭೂರು ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕು.ಪ್ರೇಕ್ಷಾ ಹೇಳಿದರು.

ಅವರು ಮಕ್ಕಳ ಕಲಾ ಲೋಕ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಶಂಭೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ‌ ನ.19 ರಂದು ನಡೆದ 18ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶೈಕ್ಷಣಿಕ‌ ಜೀವನದ ಅಭಿವೃದ್ಧಿಗೆ ಪಠ್ಯದ ಜೊತೆಗೆ ಪಠ್ಯಪೂರಕ ಚಟುವಟಿಕೆಗಳು ಅಗತ್ಯವಾಗಿ ಬೇಕು, ಆಗ ಜ್ಞಾನ ವೃದ್ಧಿಯಾಗುತ್ತದೆ ಎಂದು ತಿಳಿಸಿದರು. ಇಂತಹ ಕಾರ್ಯಕ್ರಮಗಳಿಂದ ಮಕ್ಕಳ ಕೌಶಲ್ಯಾಭಿದ್ಧಿಯಾಗುತ್ತದೆ, ಮಕ್ಕಳು ಸಾಹಿತ್ಯದ ವಿಚಾರಧಾರೆಯನ್ನು ಆಲಿಸುವ, ಮತ್ತು ಓದುವ ಹವ್ಯಾಸ ಬೆಳೆಸಬೇಕು ಎಂದು ತಿಳಿಸಿದರು.

ಕಡೇಶ್ವಾಲ್ಯ ಸ.ಪ್ರೌಢಶಾಲೆಯ ವಿದ್ಯಾರ್ಥಿನಿ ಕು.ಸಾನ್ವಿ ಸುವರ್ಣ ಸಮ್ಮೇಳನವನ್ನು ಉದ್ಘಾಟಿಸಿದರು.

ಕನ್ನಡ ಎಲ್ಲರ ಮನದ ಭಾಷೆಯಾದರೆ ಮಾತ್ರ ಜನರ ಭಾಷೆ ಆಡಳಿತ ಭಾಷೆಯಾಗಿ ಉಳಿಯಬಲ್ಲದು. ಸಹಸ್ರಾರು ವರ್ಷಗಳ ಹಿರಿತನವುಳ್ಳ ಜಾನಪದ ಪರಂಪರೆಯಲ್ಲಿ ಮಕ್ಕಳ ಸಾಹಿತ್ಯದ ಬೇರುಗಳು ಅಡಕವಾಗಿದೆ. ಭವಿಷ್ಯದಲ್ಲಿ ಯಾವುದೇ ವೃತ್ತಿಯಿದ್ದರೂ ಕನ್ನಡಕ್ಕೆ ಆದ್ಯತೆ ಇರಲಿ..ಪರಿಸರದ ಎಲ್ಲ ಜೀವಸಂಕುಲ‌ಗಳು ಮಕ್ಕಳ‌ಸಾಹಿತ್ಯದಲ್ಲಿ ಮೆರೆಯಲಿ ಎಂದು ಆಶಿಸಿದರು.

ಸಮ್ಮೇಳನದಲ್ಲಿ ಮಕ್ಕಳ ಸ್ವರಚಿತ ಕೃತಿಗಳನ್ನು ಸಾಹಿತಿ, ನಿವೃತ್ತ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಚೂಂತಾರು ಬಿಡುಗಡೆ ಗೊಳಿಸಿದರು. ಸಮತೋಲಿತ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಇಂತಹ ಸಮ್ಮೇಳನ‌ ಉತ್ತಮ‌ ವೇದಿಕೆಯಾಗಿದೆ.

ಮಕ್ಕಳ‌ಹುಟ್ಟುವ ಮೊದಲೇ ಎಲ್ ಕೆಜಿ ಯುಕೆಜಿಗೆ ದಾಖಲಾತಿಗಾಗಿ ಕಾದಿರಿಸುವ ಅವಾಸ್ತವ ಶಿಕ್ಷಣ ಪರಂಪರೆವಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮನಸ್ಸನ್ನು ಅರಳಿಸುವ ಶಕ್ತಿ ಸಾಹಿತ್ಯಕ್ಕಿದೆ.ಮಕ್ಕಳಿಗೆ ಅಂಕ ಗಳಿಕೆಯ ಸಾಧನೆಯನ್ನೇ ಗುರಿಯಾಗಿಸಿದರೆ, ಮಕ್ಕಳು ಹಾದಿ ತಪ್ಪುವ ಸಾಧ್ಥೆಯೇ ಹೆಚ್ಚು ಎಂದವರು ಅಭಿಪ್ರಾಯಿಸಿದರು.

ಬೆಳ್ತಂಗಡಿ ವಾಣಿ ಪಿ.ಯು. ಕಾಲೇಜಿನ ದ್ವಿತೀಯ ಪಿ.ಯು. ತರಗತಿಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕುಮಾರಿ ವಿಭಾ ಕೆ.ಆರ್ ಮಾತನಾಡಿ ಸಾಹಿತ್ಯದ ಹವ್ಯಾಸ ನಮಗೆ ಜೀವಕಳೆಯನ್ನು ಹೆಚ್ಚಿಸುತ್ತದೆ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ,ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ , ಮಕ್ಕಳ ಸಾಹಿತ್ಯ ಸಮ್ಮೇಳನದ ಗೌರವಾಧ್ಯಕ್ಷ ಆನಂದ ಎ ಶಂಭೂರು , ಶಾಲಾ ಮುಖ್ಯಶಿಕ್ಷಕ ಜಯರಾಮ ಡಿ.ಪಡ್ರೆ, ಸ್ವಾಗತ ಸಮಿತಿಯ ರಾಜೇಶ್ ಶಾಂತಿಲ ಮತ್ತು ಹೆನ್ರಿ ಬುಕೆಲ್ಲೋ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಾಲಾಭಿವೃದ್ಧಿ ಸಮಿತಿ‌ ಅಧ್ಯಕ್ಷ ಹೇಮಚಂದ್ರ ಭಂಡಾರದ ಮನೆ ಕನ್ನಡ ಧ್ವಜಾರೋಹಣಗೈದರು, ಕನ್ನಡ‌ಸಾಹಿತ್ಯ ಪರಿಷತ್ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಕನ್ನಡ ಸಾಹಿತ್ಯ ಪರಿಷತ್ ಧ್ವಜಾರೋಹಣ ಗೈದರು. ಗ್ರಾಮಪಂಚಾಯತ್ ಉಪಾಧ್ಯಕ್ಷೆ ಮೋಹಿನಿ ಮತ್ತಿತರ ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಕ್ಕಳ ಕಲಾಲೋಕದ ಅಧ್ಯಕ್ಷ ರಮೇಶ ಎಂ ಬಾಯಾರು ಪ್ರಾಸ್ತಾವಿಕವಾಗಿ ಮಾತನಾಡಿದರು. ನರಿಕೊಂಬು ಶಾಲೆಯ ವಿದ್ಯಾರ್ಥಿನಿ ಕು. ಧೃತಿ ಸ್ವಾಗತಿಸಿದರು. ನಾಯಿಲ ಶಾಲಾ ವಿದ್ಯಾರ್ಥಿನಿ ಹರ್ಷಿತಾ ವಂದಿಸಿದರು. ಅಡ್ಯನಡ್ಕ ಜನತಾ ಕಾಲೇಜಿನ ವಿದ್ಯಾರ್ಥಿನಿ ಕು.ಭಾಗ್ಯಶ್ರೀ ಕಾರ್ಯಕ್ರಮ‌ನಿರ್ವಹಿಸಿದರು.

ಕಾರ್ಯಕ್ರಮಕ್ಕೆ‌ಮುನ್ನ ಶೇಡಿಗುರಿಯಿಂದ‌ಶಾಲೆಯ ವರೆಗೆ ಭವ್ಯ ಮೆರವಣಿಗೆ ನಡೆಯಿತು.‌ನರಿಕೊಂಬು ಗ್ರಾ.ಪಂ.ಅಧ್ಯಕ್ಷ ಸಂತೋಷ್ ಕುಮಾರ್ ಮೆರವಣಿಗೆ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದ ಬಳಿಕ

ಸುಮಾರು ಐದು ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಸಮ್ಮೇಳನದ ವಿವಿಧ ಚಟುವಟಿಕೆಗಳಾದ ಕಿರು ನಾಟಕ, ಕಲಾ ರಂಗ ಸಂಗಮ, ಮಾತುಕತೆ ಮತ್ತು ಸಾಹಿತ್ಯ ಗೋಷ್ಠಿಗಳಲ್ಲಿ ಭಾಗವಹಿಸಿದ್ದರು.

More from the blog

ಶಂಭೂರು: ಸಮಗ್ರ ತ್ಯಾಜ್ಯ ನಿರ್ವಹಣಾ ಘಟಕ(ಎಂಆರ್‌ಎಫ್)ದ ಕಾಮಗಾರಿ ಪೂರ್ಣ… ನಾಳೆಯಿಂದ ಪ್ರಾಯೋಗಿಕ ಕಾರ್ಯ ಆರಂಭ

ಬಂಟ್ವಾಳ: ಬಂಟ್ವಾಳ ಹಾಗೂ ಉಳ್ಳಾಲ ತಾಲೂಕುಗಳ ಒಟ್ಟು 57 ಗ್ರಾ.ಪಂ.ಗಳ ಘನ ತ್ಯಾಜ್ಯಗಳನ್ನು ನಿರ್ವಹಿಸುವ ದೃಷ್ಟಿಯಿಂದ ನರಿಕೊಂಬು ಗ್ರಾ.ಪಂ.ವ್ಯಾಪ್ತಿಯ ಶಂಭೂರಿನಲ್ಲಿ ಸುಮಾರು 1.95 ಕೋ.ರೂ.ವೆಚ್ಚದಲ್ಲಿ ಅನುಷ್ಠಾನಗೊಂಡ ಸಮಗ್ರ ತ್ಯಾಜ್ಯ ನಿರ್ವಹಣಾ ಘಟಕ(ಎಂಆರ್‌ಎಫ್)ದ ಕಾಮಗಾರಿ...

ದ.ಕ ಜಿಲ್ಲಾಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಷ್ಟೀಯ ಪತ್ರಿಕಾ ದಿನಾಚರಣೆ; ಪತ್ರಿಕಾ ವಿತರಕರಿಗೆ ಸನ್ಮಾನ

ಮಂಗಳೂರು: ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದಿಂದ ಹಮ್ಮಿಕೊಂಡ ರಾಷ್ಟೀಯ ಪತ್ರಿಕಾ ದಿನದ ಕಾರ್ಯ ಕ್ರಮದ ಅಂಗವಾಗಿ ನಗರದ ಹಿರಿಯ ಪತ್ರಿಕಾ ವಿತರಕ ನಾಗರಾಜ್ ಅವರನ್ನು ಪತ್ರಿಕಾ ಭವನದಲ್ಲಿ ಮಂಗಳವಾರ ಸನ್ಮಾನಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆ...

ನಕ್ಸಲ್ ನಾಯಕ ವಿಕ್ರಂ ಗೌಡ ಎನ್ ಕೌಂಟರ್ ಗೆ ಬಲಿ

ಕಾರ್ಕಳ: ಕಳೆದ‌ ಕೆಲ ದಿನಗಳಿಂದ ಕಾರ್ಕಳ, ಹೆಬ್ರಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ಕೂಂಬಿಂಗ್ ತೀವ್ರಗೊಳಿಸಿದ್ದ ಎಎನ್ಎಫ್ ನಿಂದ ನಕ್ಸಲ್ ನಾಯಕ ವಿಕ್ರಂ ಗೌಡ ನನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ. ಹೆಬ್ರಿ...

ನರೇಗಾ ಯೋಜನೆ : ಕಾಮಗಾರಿ ಬೇಡಿಕೆ ಸಲ್ಲಿಸಲು ನ.25 ಕೊನೆಯ ದಿನ

ದಿನಾಂಕ 01.04.2025 ರಿಂದ 31.03.2026ವರೆಗೆ ನರೇಗಾ ಯೋಜನೆಯಲ್ಲಿ ಅಡಿಕೆ ಕೃಷಿ, ತೆಂಗು ಕೃಷಿ, ಕಾಳುಮೆಣಸು ನಾಟಿ, ರಾಂಬೂಟನ್ ಕೃಷಿ ಇನ್ನಿತರ ತೋಟಗಾರಿಕಾ ಕಾಮಗಾರಿಗಳು, ಬಾವಿ ರಚನೆ, ದನದ ಹಟ್ಟಿ ರಚನೆ, ದ್ರವತ್ಯಾಜ್ಯ ಗುಂಡಿ...