ಪುರಸಭೆಯಲ್ಲಿ 3 ತಿಂಗಳಿಗೊಮ್ಮೆ ನಡೆಸುತ್ತಿದ್ದ ಪರಿಶಿಷ್ಟ ಜಾತಿ/ ಪಂಗಡದವರ ಕುಂದು ಕೊರತೆಗಳ ಸಭೆಯನ್ನು ಸ್ಥಗಿತಗೊಳಿಸಿರುವುದನ್ನು ಪುನ: ಪ್ರಾರಂಭಿಸುವಂತೆ ಬಂಟ್ವಾಳ ತಾಲೂಕು ಜಿಲ್ಲಾ ಆದಿ ದ್ರಾವಿಡ ಸಮಾಜ ಸೇವಾ ಸಂಘ (ರಿ.) ಅಧ್ಯಕ್ಷರು ವಿಶ್ವನಾಥ ಚೆಂಡ್ತಿಮಾರ್ ಅವರು ಮನವಿ ಮಾಡಿದ್ದಾರೆ.
ಬಂಟ್ವಾಳ ಪುರಸಭೆಯಲ್ಲಿ ಈ ಹಿಂದೆ 3 ತಿಂಗಳಿಗೊಮ್ಮೆ ಪರಿಶಿಷ್ಟ ಜಾತಿ/ ಪಂಗಡದವರ ಕುಂದು ಕೊರತೆಗಳ ಸಭೆಯನ್ನು ನಡೆಸುತ್ತಿದ್ದು, ಇತ್ತೀಚಿಗೆ ಕೆಲವು ಸಮಯಗಳಿಂದ ಸಭೆಯನ್ನು ನಡೆಸುತ್ತಿಲ್ಲ. ಈ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಿರುವುದಿಲ್ಲ. ಸಭೆಯು ನಡೆದಲ್ಲಿ ಪರಿಶಿಷ್ಟ ಜಾತಿ / ಪಂಗಡಕ್ಕೆ ಸೇರಿದವರ ಸಮಸ್ಯೆಗಳ ಬಗ್ಗೆ ಹಾಗೂ ಅವರಿಗೆ ಸಿಗುವಂತಹ ಸವಲತ್ತುಗಳ ಬಗ್ಗೆ ಸಮಗ್ರವಾದ ಮಾಹಿತಿ ಲಭ್ಯವಾಗುತ್ತಿತ್ತು. ಆದರೆ ಇದೀಗ ಸಭೆಯನ್ನು ಸ್ಥಗಿತಗೊಳಿಸಿರುವುದರಿಂದ ಪರಿಶಿಷ್ಟ ಜಾತಿ/ ಪಂಗಡದವರಿಗೆ ತುಂಬಾ ಸಮಸ್ಯೆಯಾಗಿದೆ. ಆದ್ದರಿಂದ ಈ ಬಗ್ಗೆ ಪರಿಶೀಲನೆ ನಡೆಸಿ, ಸಭೆಯನ್ನು ಮರು ಪ್ರಾರಂಭಿಸುವ ಬಗ್ಗೆ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.