ವಿಟ್ಲ: ವ್ಯಕ್ತಿಯೋರ್ವರು ಮೃತಪಟ್ಟ ಸ್ಥಿತಿಯಲ್ಲಿ ಮನೆಯಲ್ಲಿ ಪತ್ತೆಯಾದ ಘಟನೆ ವಿಟ್ಲ ಸಮೀಪದ ಕನ್ಯಾನದ ಪಂಜಿಗದ್ದೆ ದೇಲಂತಬೆಟ್ಟು ಎಂಬಲ್ಲಿ ನಡೆದಿದೆ.
ಕನ್ಯಾನದ ಪಂಜಿಗದ್ದೆ ದೇಲಂತಬೆಟ್ಟು ನಿವಾಸಿ ಮೌರಿಸ್ ಡಿಸೋಜಾ(61 ವ.) ಮೃತ ವ್ಯಕ್ತಿ.
ಮೌರೀಸ್ ರವರು ಒಬ್ಬಂಟಿಯಾಗಿಯೇ ಮನೆಯಲ್ಲಿದ್ದು, ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ.