Tuesday, February 3, 2026

2028ರ ಒಲಿಂಪಿಕ್‌ಗೆ ಕ್ರಿಕೆಟ್ ತಂಡಗಳನ್ನು ಕಳುಹಿಸಲು ಬಿಸಿಸಿಐ ತೀರ್ಮಾನ

ಲಾಸ್ ಏಂಜಲೀಸ್: 2028ರ ಲಾಸ್ ಏಂಜಲೀಸ್ ಒಲಿಂಪಿಕ್‌ನಲ್ಲಿ ಕ್ರಿಕೆಟ್ ಸೇರ್ಪಡೆಗೊಳಿಸಲು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ನಿರ್ಧರಿಸಿದ್ದು, ಭಾರತ ಪುರುಷ ಹಾಗೂ ಮಹಿಳಾ ತಂಡಗಳನ್ನು ಕಳುಹಿಸಲು ಬಿಸಿಸಿಐ ತೀರ್ಮಾನಿಸಿದೆ ಎನ್ನಲಾಗಿದೆ.

ಬಿಸಿಸಿಐ 2020ರ ವಾರ್ಷಿಕ ಸಾಮಾನ್ಯ ಸಭೆಯಲ್ಲೂ ಒಲಿಂಪಿಕ್ಸ್ಗೆ ಭಾರತ ತಂಡವನ್ನು ಕಳಿಸಿಕೊಡುವ ಕುರಿತು ಚರ್ಚೆ ನಡೆಸಿತ್ತು. ಇದೀಗ 2028ರ ಒಲಿಂಪಿಕ್ಸ್ನಲ್ಲಿ ಭಾರತ ಕ್ರಿಕೆಟ್ ತಂಡವನ್ನು ಕಳುಹಿಸಿಕೊಡುವ ಕುರಿತಂತೆ ಅಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗಿದೆ. ಕ್ರಿಕೆಟ್ 1900ರ ಒಲಿಂಪಿಕ್ಸ್ ನಲ್ಲಿ ಕೊನೆಯ ಬಾರಿಗೆ ಸೇರ್ಪಡೆಗೊಂಡಿತ್ತು.

2021ರ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟವು ಜುಲೈ 23ರಿಂದ ಆಗಸ್ಟ್ 08ರವರೆಗೆ ನಡೆಯಲಿದೆ.

More from the blog

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...

B.C. Road : FTM ತರಬೇತಿ ಮತ್ತು ಅಭಿಯಾನ ಕಾರ್ಯಕ್ರಮ..

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...