Friday, July 11, 2025

2ನೇ ಡೋಸ್‍ಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು : ದೇಶದಲ್ಲಿ ಕೋವಿಡ್-19 ಸೋಂಕಿನ 100 ಕೋಟಿ ಲಸಿಕೆ ಪೂರ್ಣಗೊಂಡ ಹಿನ್ನಲೆಯಲ್ಲಿ ಇದೇ ಅ.22ರ ಶಕ್ರವಾರ ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ಲಸಿಕಾ ಮೇಳದಲ್ಲಿ 2ನೇ ಡೋಸ್‍ಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಜಿಲ್ಲಾ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅವರು ಅ.21ರ ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯ ವಿಡಿಯೋ ಕಾನ್ಪರೆನ್ಸ್ ಹಾಲ್‍ನಲ್ಲಿ ಕೋವಿಡ್-19 ಲಸಿಕಾ ಪ್ರಗತಿಗೆ ಸಂಬಂಧಿಸಿದ ಸಭೆಯಲ್ಲಿ ಮಾತನಾಡಿದರು.

ಅ.22ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಕೋವಿಡ್‍ನ ಒಟ್ಟು 1,20,000 ಲಸಿಕಾಕರಣ ಗುರಿ ನೀಡಲಾಗಿದೆ, ಎರಡನೇ ಡೋಸ್ ಪಡೆಯುವವರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಬೇಕು, 18 ವರ್ಷಕ್ಕಿಂತ ಮೇಲ್ಪಟ್ಟಿರುವ ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಲಸಿಕೆ ನೀಡುವ ಮೂಲಕ ಈ ಲಸಿಕಾ ಮೇಳವನ್ನು ಯಶಸ್ವಿಯಾಗಿಸಬೇಕು ಎಂದು ಅವರು ಸೂಚಿಸಿದರು.

ಮಂಗಳೂರಿಗೆ 65,000 ರಿಂದ 67,000, ಬಂಟ್ವಾಳ ತಾಲೂಕಿಗೆ 15,000, ಬೆಳ್ತಂಗಡಿ ತಾಲೂಕಿಗೆ 18,000 ಪುತ್ತೂರು ತಾಲೂಕಿಗೆ 14,000, ಸುಳ್ಯ ತಾಲೂಕಿಗೆ 6,000 ದಂತೆ ಲಸಿಕಾ ಮೇಳದ ಗುರಿ ನಿಗದಿಪಡಿಸಲಾಗಿದೆ, ಕೋವಿಡ್ ಸಂಭಾವ್ಯ ಮೂರನೇ ಅಲೆಯ ಮುನ್ನೆಚ್ಚರಿಕೆಯ ಸಲುವಾಗಿ ಹೆಚ್ಚಿನ ಕೋವಿಡ್ ತಪಾಸಣೆ ಕೈಗೊಳ್ಳಬೇಕು ಎಂದ ಅವರು ಪ್ರತಿಯೊಬ್ಬರೂ ಕೋವಿಡ್ ನಿಯಮಗಳನ್ನು ಪಾಲಿಸುತ್ತಿರುವ ಬಗ್ಗೆ ಹೆಚ್ಚಿನ ನಿಗಾ ವಹಿಸುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಅಂಗನವಾಡಿ, ಆಶಾ ಹಾಗೂ ಆರೋಗ್ಯ ಕಾರ್ಯಕರ್ತೆಯರು ಪ್ರತೀ ಮನೆ-ಮನೆಗೆ ಭೇಟಿ ನೀಡಿ ಕೋವಿಡ್‍ನ ಮೊದಲ ಡೋಸ್ ಲಸಿಕೆ ಪಡೆದಿರುವ ಬಗ್ಗೆ ಖಾತ್ರಿ ಪಡಿಸಿಕೊಂಡು 2ನೇ ಲಸಿಕೆ ಪಡೆಯದವರಿಗೆ ಕೂಡಲೇ ಲಸಿಕೆ ಪಡೆಯುವ ಕುರಿತು ಜಾಗೃತಿ ಮೂಡಿಸಬೇಕು, ವಿದ್ಯಾರ್ಥಿಗಳ ಪೋಷಕರು ಲಸಿಕೆ ಪಡೆದಿರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಮಾತನಾಡಿ, ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರು, ಆರೋಗ್ಯಾಧಿಕಾರಿಗಳು, ಅಂಗನವಾಡಿ ಹಾಗೂ ಆಶಾಕಾರ್ಯಕರ್ತೆಯರು ಹಾಗೂ ಇತರ ಸಂಬಂಧಪಟ್ಟ ಅಧಿಕಾರಿಗಳು ಜಿಲ್ಲೆಯಲ್ಲಿ 2ನೇ ಡೋಸ್ ಲಸಿಕೆ ಪಡೆಯಲು ಬಾಕಿ ಉಳಿದುಕೊಂಡಿರುವವರ ಪಟ್ಟಿ ಮಾಡಬೇಕು ಹಾಗೂ ಕಾಲ್ ಸೆಂಟರ್ ನಿಂದ ಅವರಿಗೆ ದೂರವಾಣಿ ಕರೆ ಮಾಡಿ ಈ ಬಗ್ಗೆ ಮಾಹಿತಿ ನೀಡಬೇಖು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸದಾಶಿವ ಶ್ಯಾನುಬೋಗ್, ವಿವಿಧ ತಾಲೂಕಿನ ಆರೋಗ್ಯ ಅಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳು ಸಭೆಯಲ್ಲಿದ್ದರು.

 

More from the blog

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...

ರಾಷ್ಟ್ರ, ಧರ್ಮಕಾರ್ಯದಲ್ಲಿ ನಮ್ಮನ್ನು ನಾವು ಸಮರ್ಪಿಸಿಕೊಳ್ಳುವುದೇ ನಿಜವಾದ ಗುರುದಕ್ಷಿಣೆ – ಮಂಜುಳಾ ಗೌಡ

ಬಂಟ್ವಾಳ : ಪ್ರಸ್ತುತ ಹಿಂದೂ ಧರ್ಮದ ಮೇಲಿನ ಸಮಸ್ಯೆಗಳಿಗೆ ಪರಿಹಾರಕ್ಕಾಗಿ ಹಿಂದೂಗಳ ಸಂಘಟನೆ ಆವಶ್ಯಕತೆಯಿದೆ. ಆದರೆ ‘ಸಾಧನೆ ಮತ್ತು ಧರ್ಮ' ಇದು ಸಂಘಟನೆಯ ಅಡಿಪಾಯವಾಗಿದ್ದರೆ ಮಾತ್ರ ರಾಷ್ಟ್ರ-ಧರ್ಮ ಕಾರ್ಯದ ಕಟ್ಟಡ ಭದ್ರವಾಗಿರಲು ಸಾಧ್ಯ....

ಬಂಟ್ವಾಳ ತಾಲೂಕು ತುಳುವ ಮಹಾಸಭೆಯ ಸಂಚಾಲಕರಾಗಿ ಉಮೇಶ್ ಗೌಡ ಮಾಡತ್ತೇಲು ಆಯ್ಕೆ

ಬಂಟ್ವಾಳ : ತುಳುನಾಡಿನ ಅಸ್ಮಿತೆಯ ಚಳುವಳಿಯಾಗಿ ಗುರುತಿಸಲ್ಪಟ್ಟ ತುಳುವ ಮಹಾಸಭೆ ತನ್ನ ಶತಮಾನೋತ್ಸವದ ಸಂಧರ್ಭದಲ್ಲಿ ಹೊಸ ಚಟುವಟಿಕೆಗಳಿಗೆ ಪುನಶ್ಚೇತನ ನೀಡುತ್ತಿದೆ. ಇಂತಹ ನಿರ್ಣಾಯಕ ಸಮಯದಲ್ಲಿ, ಬಂಟ್ವಾಳ ತಾಲೂಕು ಘಟಕದ ಸಂಚಾಲಕರಾಗಿ ಸಮಾಜ ಶಾಸ್ತ್ರದಲ್ಲಿ...

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ : ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ..

ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ...