ಬೆಂಗಳೂರು : ಕೊರೋನಾ ಸಂಕಷ್ಟದ ನಡುವೆಯೂ ಇಂಗ್ಲಿಷ್ ಪರೀಕ್ಷೆ ನಡೆದ ನಂತರ ದ್ವಿತೀಯ ಪಿಯುಸಿಯ ಫಲಿತಾಂಶ ನಾಳೆ ಪ್ರಕಟಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ನಾಳೆ ಬೆಳಿಗ್ಗೆ 11.30ಕ್ಕೆ ವಿದ್ಯಾರ್ಥಿಗಳ ಮೊಬೈಲ್ ಗೆ ಫಲಿತಾಂಶ ತಲುಪಲಿದೆ. ಈ ಮೂಲಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ ಎಂಬುದಾಗಿ ತಿಳಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾಹಿತಿ ನೀಡಿದ ಅವರು ಇತ್ತೀಚೆಗೆ ಮುಕ್ತಾಯಗೊಂಡ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಬೆಳಿಗ್ಗೆ 11.30ಕ್ಕೆ ಪ್ರಕಟಗೊಳ್ಳಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆದಂತ ಪ್ರತಿ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಫಲಿತಾಂಶದ ವಿವರ ಬರಲಿದೆ. ಯಾವುದೇ ವಿದ್ಯಾರ್ಥಿಗಳು ಶಾಲೆಯ ಬಳಿ ಹೋಗಬಾರದು ಎಂದು ತಿಳಿಸಿದ್ದಾರೆ. ವಿದ್ಯಾರ್ಥಿಗಳು ನೀಡಿರುವಂತ ಮೊಬೈಲ್ ಸಂಖ್ಯೆಗೆ ನಾಳೆ ಫಲಿತಾಂಶ ಬರಲಿದೆ ಎಂದು ತಿಳಿಸಿದ್ದಾರೆ.

