Sunday, February 1, 2026

ತಾಲೂಕು ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಕ್ರೀಡಾಕೂಟ

ಪದವಿ ಪೂರ್ವ ಶಿಕ್ಷಣ ಇಲಾಖೆ ದ.ಕ ಜಿಲ್ಲೆ, ತುಂಬೆ ಪದವಿ ಪೂರ್ವ ಕಾಲೇಜು, ತುಂಬೆ ಬಂಟ್ವಾಳ ತಾಲೂಕು ಮತ್ತು ಮದನಿ ಪದವಿ ಪೂರ್ವ ಕಾಲೇಜು ಅಳೇಕಲ ಉಳ್ಳಾಲ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಕ್ರೀಡಾಕೂಟವು ಇತ್ತೀಚೆಗೆ ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ನಡೆಯಿತು.

ತುಂಬೆಯ ಮುಹಿಯುದ್ದೀನ್ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಅಬ್ದುಲ್ ಸಲಾಂ ಅಧ್ಯಕ್ಷತೆ ವಹಿಸಿದ್ದರು. ತುಂಬೆ ಪದವಿ ಪೂರ್ವ
ಕಾಲೇಜಿನ ಪ್ರಾಂಶುಪಾಲರಾದ ಕೆ.ಎನ್.ಗಂಗಾಧರ ಆಳ್ವ ಸ್ವಾಗತಿಸಿ, ಪ್ರಸ್ತಾವನೆ ನೀಡಿದರು. ತುಂಬೆ ಪದವಿ ಪೂರ್ವ ಕಾಲೇಜಿನ
ವಿದ್ಯಾರ್ಥಿ ಆಸೀಫ್ ಕ್ರೀಡಾ ಪ್ರತಿಜ್ಞೆಯನ್ನು ನೆರವೇರಿಸಿದರು.

ಪದವಿ ಪೂರ್ವ ಶಿಕ್ಷಣ  ಇಲಾಖೆ ಮಂಗಳೂರು, ದ. ಕ. ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಶಾಖಾಧಿಕಾರಿ ನಿತಿನ್ ಬಿ. ಟಿ. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.  ಪ್ರಾಂಶುಪಾಲರ ಸಂಘದ ಪದಾಧಿಕಾರಿಗಳಾದ ವಿಠಲ್, ಯೂಸುಫ್ ವಿಟ್ಲ, ಕವಿತಾ, ಸಯ್ಯದ್ ಮದನಿ ಪ. ಪೂ.ಕಾಲೇಜಿನ ಪ್ರಾಂಶುಪಾಲ ಇಸ್ಮಾಯಿಲ್, ದೈಹಿಕ ಶಿಕ್ಷಣ ಉಪನ್ಯಾಸಕ ಸಂಘದ ಪ್ರೇಮನಾಥ್ ಶೆಟ್ಟಿ, ಕ್ರೀಡಾಕೂಟದ ಸಂಯೋಜಕ
ಅರುಣ್ ಡಿ’ಸೋಜ, ತುಂಬೆ ಪದವಿ ಪೂರ್ವ ಕಾಲೇಜಿನ ಕಚೇರಿ ಅಧೀಕ್ಷಕ ಅಬ್ದುಲ್ ಕಬೀರ್ ಹಾಗೂ ಉಪನ್ಯಾಸಕ ದಿನೇಶ ಶೆಟ್ಟಿ ಅಳಿಕೆ,
ಜಗದೀಶ ರೈ ಬಿ., ನೀತಾಶ್ರೀ, ಅಖಿಲಾ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಸುಧಾಕರ ಶೆಟ್ಟಿ ನಿರೂಪಿಸಿ, ತುಂಬೆ ಪದವಿ ಪೂರ್ವ ಕಾಲೇಜಿನ ದೈಹಿಕ
ಶಿಕ್ಷಣ ನಿರ್ಧೇಶಕ ಸಾಯಿರಾಂ ನಾಯಕ್ ವಂದಿಸಿದರು.

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...