Friday, January 30, 2026

ಮಾಣಿಲ ಶ್ರೀ ಧಾಮ ವರಮಹಾಲಕ್ಷ್ಮೀ ವೃತಾಚರಣೆಯ ಬೆಳ್ಳಿ ಹಬ್ಬ ಮಹೋತ್ಸವ : ಪೂರ್ವಭಾವಿ ಸಭೆ

ವಿಟ್ಲ: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯ ಬೆಳ್ಳಿ ಹಬ್ಬ ಮಹೋತ್ಸವದ ಪ್ರಯುಕ್ತ ಜು.10ರಂದು ವಿಟ್ಲ ಪಂಚಲಿಂಗೇಶ್ವರ ಸದನದಲ್ಲಿ ನಡೆದ ವಿಟ್ಲ ವಲಯದ ಪೂರ್ವಭಾವಿ ಸಭೆಯಲ್ಲಿ ಸಮಿತಿ ರಚನೆಯನ್ನು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯಿತು.

ವೇದಿಕೆಯಲ್ಲಿ ಮಾಣಿಲ ಕ್ಷೇತ್ರದ ಕೇಂದ್ರ ಸಮಿತಿಯ ಗೌರವ ಮಾರ್ಗದರ್ಶಕರು ಪ್ರಸಾದ್‌ ಪಾಂಗಾಣ್ಣಾಯ, ಸಂಚಾಲಕ ತಾರಾನಾಥ ಕೊಟ್ಟಾರಿ, ಕಾರ್‍ಯಾಧ್ಯಕ್ಷ ಅಶೋಕ್‌ ಶೆಟ್ಟಿ ಸರಪಾಡಿ, ಪ್ರಧಾನ ಕಾರ್ಯದರ್ಶಿ ದೇವಪ್ಪ ಕುಲಾಲ್‌ ಪಂಜಿಕಲ್ಲು, ಉಪಾಧ್ಯಕ್ಷ ಕೃಷ್ಣಯ್ಯ ವಿಟ್ಲ ಅರಮನೆ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ಕಾರ್ಯದರ್ಶಿ ಪದ್ಮನಾಭ ಕಟ್ಟೆ ವಿಟ್ಲ ನಿರೂಪಿಸಿ, ರಾಜೇಶ್‌ R.K ಧನ್ಯವಾದ ಸಮರ್ಪಿಸಿದರು. ಸಭೆಯಲ್ಲಿ ಕಾರ್ಯಕಾರಿಣಿ ಪ್ರಮುಖರು, ಸದಸ್ಯರೆಲ್ಲರೂ ಉಪಸ್ಥಿತರಿದ್ದರು. 48ದಿನಗಳ ಪರ್ಯಂತ ಸಾಮೂಹಿಕ ಶ್ರೀ ಲಕ್ಷ್ಮೀಪೂಜೆ ಜು.16-ಆ.25 ತನಕ ನಡೆಯಲಿದ್ದು, ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ಆ.25-27ರವರೆಗೆ ನಡೆಯಲಿದೆ. ಇದೇ ಸಂದರ್ಭದಲ್ಲಿ ವರಮಹಾಲಕ್ಷ್ಮೀ ವೃತಾಚರಣೆ ಬೆಳ್ಳಿಹಬ್ಬ ಮಹೋತ್ಸವದ ವಿಟ್ಲ ವಲಯ ಸಮಿತಿ ರಚಿಸಲಾಯಿತು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...