Monday, January 26, 2026

ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಪುರಾತನ ಶಿವಲಿಂಗ ಪತ್ತೆ

ಬೆಳ್ತಂಗಡಿ: ಉಜಿರೆ ಸಮೀಪದ ಪೆರ್ಲದಲ್ಲಿ ಪುರಾತನ ಶಿವಲಿಂಗವೊಂದು ಪತ್ತೆಯಾಗಿದೆ.

ಗ್ರಾಮಸ್ಥರಿಂದ ಪುರಾತನ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣಕ್ಕಾಗಿ ದೈವಜ್ಞರಿಂದ ಅಷ್ಟಮಂಗಲ ಪ್ರಶ್ನೆ ಇಟ್ಟ ಸಂದರ್ಭದಲ್ಲಿ ದೇವಸ್ಥಾನದ ಕುರುಹು ಇದ್ದ ಪಕ್ಕದ ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗವೊಂದು ಪತ್ತೆಯಾಗಿದೆ.

ಡಿ.8 ಮತ್ತು 9 ಹಾಗೂ 15 ಮತ್ತು 16ರಂದು ದೈವಜ್ಞರಾದ ನೆಲ್ಯಾಡಿ ಶ್ರೀಧರ ಗೋರೆಯವರ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನೆ ನಡೆಯುತ್ತಿತ್ತು. ಈ ವೇಳೆ ಪರಿಸರದಲ್ಲಿ ಶಿವನ ಸಾನಿಧ್ಯವಿದೆಯೆಂದು ಗೋಚರಿಸುತ್ತದೆ ಎಂದು ತಿಳಿಸಿದ್ದರು ಅಂತೆಯೇ ಅವರು ತಿಳಿಸಿದ ಜಾಗದಲ್ಲಿ ಅಗೆದಾಗ ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗ ಪತ್ತೆಯಾಗಿದೆ. ಸುಮಾರು 2 ರಿಂದ 3 ಅಡಿ ಉದ್ದದ ಶಿವಲಿಂಗದ ಪಾಣಿಪೀಠ ಇರುವ ಶಿವಲಿಂಗವಾಗಿದೆ.ಸುಮಾರು 400 ರಿಂದ 500 ವರ್ಷಗಳಷ್ಟು ಹಳೆಯದಾಗಿದೆ ಎಂದು ತಿಳಿದುಬಂದಿದ್ದು ಶಿವಲಿಂಗ ಪ್ರತಿಷ್ಟೆಯಾಗಬೇಕು ಎಂದು ಕಂಡುಬಂದಿದೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...