Friday, June 27, 2025

25 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಪುಂಜೋಳಿಮಾರುಗುತ್ತು-ಪಡ್ಡೆಮಜಲು ಕಾಂಕ್ರೀಟ್ ರಸ್ತೆ ಉದ್ಘಾಟಣೆ

ಬಂಟ್ವಾಳ: ಗೋಳ್ತಮಜಲು ಗ್ರಾ.ಪಂ.ವ್ಯಾಪ್ತಿಯ ಅಮ್ಟೂರು ಗ್ರಾಮದದಲ್ಲಿ 25 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಪುಂಜೋಳಿಮಾರುಗುತ್ತು-ಪಡ್ಡೆಮಜಲು ಕಾಂಕ್ರೀಟ್ ರಸ್ತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಸೋಮವಾರ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರನ್ನು ಸನ್ಮಾನಿಸಲಾಯಿತು. ರಸ್ತೆಗೆ ಸ್ಥಳದಾನ ನೀಡಿದ ದಾನಿಗಳನ್ನು ಗೌರವಿಸಲಾಯಿತು. ಜತೆಗೆ ಗ್ರಾ.ಪಂ.ನ ಸ್ಥಳೀಯ ನೂತನ ಸದಸ್ಯರನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಜಿ.ಪಂ.ಸದಸ್ಯೆ ಕಮಲಾಕ್ಷಿ ಪೂಜಾರಿ, ತಾ.ಪಂ.ಸದಸ್ಯ ಮಹಾಬಲ ಆಳ್ವ, ಮೋಹನರಾಜ ಚೌಟ  ಪುಂಜೋಳಿ ಮಾರುಗುತ್ತು, ನಿರಂಜನ್ ಜೈನ್, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ತಾ.ಪಂ.ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು, ರಮನಾಥ ರಾಯಿ, ಪುರುಷೋತ್ತಮ ಶೆಟ್ಟಿ, ಚಿದಾನಂದ ರೈ, ಶ್ರೀಧರ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

ಗೋಳ್ತಮಜಲು ಗ್ರಾ.ಪಂ.ಸದಸ್ಯ ರಾಜೇಶ್ ಕೊಟ್ಟಾರಿ ಕಾರ್ಯಕ್ರಮ ನಿರ್ವಹಿಸಿದರು.

More from the blog

ವಿಟ್ಲ: ಪ್ಲಾಸ್ಟಿಕ್ ಜಾಗೃತಿ ಕಾರ್ಯಕ್ರಮ..

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ವಿಟ್ಲ ವರ್ತಕರ ಸಂಘದಿಂದ ತಯಾರಿಸಲಾದ ಪ್ಲಾಸ್ಟಿಕ್ ನಿಷೇಧದ ಸ್ಟಿಕ್ಕರ್ ನ್ನು ವರ್ತಕರ ಸಂಘದ ಸಹಕಾರದೊಂದಿಗೆ ವಿಟ್ಲ ಪೇಟೆಯ...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...