ಬೆಂಗಳೂರು: 5, 8, 9 ಮತ್ತು 11ನೇ ತರಗತಿಗೆ ಬೋರ್ಡ್ ಎಕ್ಸಾಂ ಮಾಡಲು ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದು ಮಾಡಿದೆ.

ಕಳೆದ ಡಿಸೆಂಬರ್ 2023ರಲ್ಲಿ ರಾಜ್ಯ ಸರ್ಕಾರ 5, 8, 9 ಮತ್ತು 11ನೇ ತರಗತಿಗೆ ಬೋರ್ಡ್ ಎಕ್ಸಾಂ ಮಾಡುವ ಸುತ್ತೋಲೆ ಹೊರಡಿಸಿತ್ತು. ಸರ್ಕಾರದ ಸುತ್ತೋಲೆಯನ್ನು ಪ್ರಶ್ನಿಸಿ ರೂಪ್ಸಾ ಅನುದಾನಿತ ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಅವರು ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ನ್ಯಾಯಪೀಠ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿ ಆದೇಶ ನೀಡಿದೆ.
ಬೋರ್ಡ್ ಪರೀಕ್ಷೆಗಳಿಂದ ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್ ಸಿಕ್ಕಿದ್ರೆ, ಪೋಷಕರು, ರುಪ್ಸಾ ಸಂಘಟನೆಯ ಸದಸ್ಯರು ಸಂತಸ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಆದೇಶ ಪ್ರಶ್ನಿಸಿ ಕಾನೂನು ಸಮರ ಸಾರಿದ್ದ ಖಾಸಗಿ ಶಾಲೆಯ ಸಂಘಟನೆ ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಲಾಗಿದೆ.