ಬೆಂಗಳೂರು, ಫೆ.10: ಶಾಲೆಗಳ ಬಳಿ ಸ್ಪೇಷಲ್ ಡ್ರೈವ್ ನಡೆಸುತ್ತಿದ್ದ ವೇಳೆ ಪುಟ್ಟ ಮಕ್ಕಳು ಹೆಲ್ಮೆಟ್ ಇಲ್ಲದೆ ಬಂದ ಹಿನ್ನಲೆ 6 ವರ್ಷದ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿ ಬೆಂಗಳೂರು ಸಂಚಾರಿ ಪೊಲೀಸರು ಆದೇಶ ಹೊರಡಿಸಿದ್ದಾರೆ.

ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಬಿಡುವಾಗ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು. ಮೂರಕ್ಕೂ ಹೆಚ್ಚು ಮಕ್ಕಳನ್ನು ಗಾಡಿಯಲ್ಲಿ ಕರೆದುಕೊಂಡು ಹೋಗೋ ಪೋಷಕರ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ಸಂಚಾರಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಇನ್ನು ಶಾಲಾ ಆಟೋ, ಖಾಸಗಿ ಕಾರು, TT ವಾಹನಗಳಲ್ಲಿ ನಿಗದಿತ ಮಿತಗಿಂತ ಹೆಚ್ಚಿನ ಮಕ್ಕಳನ್ನು ಶಾಲೆಗೆ ಕರೆದೊಯ್ಯುವವರ ವಿರುದ್ಧವೂ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ.