Wednesday, June 25, 2025

ರಸ್ತೆ ಬದಿಯಲ್ಲಿ ಕಸ ಎಸೆದ ವ್ಯಕ್ತಿಗಳಿಗೆ ದಂಡ ವಿಧಿಸಿದ ನಾವೂರ ಗ್ರಾ.ಪಂ.

ಬಂಟ್ವಾಳ: ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆದು ಹೋದ ವ್ಯಕ್ತಿಗಳ ಸಿ‌ಸಿ‌ ಕ್ಯಾಮಾರದಲ್ಲಿ ಗುರುತು ಪತ್ತೆ ಹಚ್ಚಿ ದಂಡ ವಸೂಲಿ ಮಾಡಿ ಎಚ್ಚರಿಕೆ ನೀಡಿದ ಘಟನೆ ನಾವೂರ ಗ್ರಾ.ಪಂ.ನಲ್ಲಿ ನಡೆದಿದೆ.

ನಾವೂರು ಗ್ರಾಮಪಂಚಾಯತ್ ವ್ಯಾಪ್ತಿಯ ಗುರಿಮಜಲು ಸೇತುವೆ ಬಳಿ ಕಸ ಕಡ್ಡಿ ಎಸೆಯುವವರ ಮೇಲೆ ದಂಡ ವಿಧಿಸಿಸುವ ಮೂಲಕ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಸುಧಾಮಣಿ ಕಸ ಎಸೆಯುವವರ ಮೇಲೆ ಎಚ್ಚರಿಕೆ ಗಂಟೆ ಮೊಳಗಿಸಿದ್ದಾರೆ.


ರಸ್ತೆಯ ಬದಿಯಲ್ಲಿ ಕಸ ಎಸೆಯಬಾರದು ಎಂದು ನಾಮಫಲಕ ಹಾಕಿದ ಮೇಲೆ ಯೂ ಕಸ ಎಸೆಯುವ ಕೆಲಸ ನಿಂತಿರಲಿಲ್ಲ.
ಈ ಬಗ್ಗೆ ಪಿಡಿಒ ಹೆಚ್ಚಿನ ಮುತುವರ್ಜಿಯಿಂದ ಸಿ.ಸಿ.ಕ್ಯಾಮರಾ ಅಳವಡಿಕೆ ಮಾಡಿದ್ದರು.
ಸಿ‌ಸಿ‌ಕ್ಯಾಮಾರ ಅಳವಡಿಕೆ ಮಾಡಿದ ಬಳಿಕ ರಸ್ತೆಯ ಬದಿಯಲ್ಲಿ ಕಸ ಎಸೆಯುವ ದೃಶ್ಯ ಸೆರೆಯಾಗಿದ್ದು ಅವರ ಗುರುತು ಪತ್ತೆ ಹಚ್ಚಿ ಅವರನ್ನು ಪಿಡಿಒ ಸ್ಥಳಕ್ಕೆ ಕರೆಯಿಸಿ ಸ್ಥಳದಲ್ಲಿಯೇ ದಂಡ ವಿಧಿಸಿದರು.
ನಾವೂರ ಗ್ರಾಮದ ಮೂವರು ವ್ಯಕ್ತಿ ಗಳು ಕಸ ಎಸೆಯುವ ದೃಶ್ಯ ಸಿ.ಸಿ.ಟಿವಿಯಲ್ಲಿ ಸೆರೆಯಾದ ಹಿನ್ನೆಲೆಯಲ್ಲಿ ಮೂವರನ್ನು ಸ್ಥಳಕ್ಕೆ ಕರೆಸಿದ ಪಿ‌ಡಿಒ ಒಬ್ಬರಿಗೆ ತಲಾ ಒಂದುವರೆ ಸಾವಿರದಂತೆ ದಂಡ ವಿಧಿಸಿದ್ದಾರೆ.

ಇದೊಂದು ಎಚ್ಚರಿಕೆಯಾಗಿದ್ದು ಮುಂದಿನ ದಿನಗಳಲ್ಲಿ ಅಂತಹವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಚಿಂತನೆ ನಡೆಸಿದೆ ಎಂದು ಅವರು ತಿಳಿಸಿದ್ದಾರೆ.

ಇದೇ ಕೆಲಸ ಪುರಸಭಾ ವ್ಯಾಪ್ತಿಯಲ್ಲಿ ಯಾಕೆ ಮಾಡುತ್ತಿಲ್ಲ ಎಂಬ ಆರೋಪ ಗಳು ಕೇಳಿ ಬರುತ್ತಿದೆ. ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ರಾಷ್ಟ್ರೀಯ ಹೆದ್ದಾರಿ ಸಹಿತ ರಸ್ತೆ ಬದಿಯಲ್ಲಿ ಅಲ್ಲಲ್ಲಿ ಕಸದ ರಾಶಿಗಳು ತುಂಬಿಕೊಂಡಿವೆ.
ಈ ಬಗ್ಗೆಮಾಧ್ಯಮಗಳು ಕಾಳಜಿಗೆ ಇಲಾಖೆ ಕಿಮ್ಮತ್ತಿನ ಸ್ಪಂದನೆಯೂ ನೀಡುತ್ತಿಲ್ಲ ಎಂಬ ಆರೋಪ ಗಳು ಕೇಳಿ ಬರುತ್ತಿದೆ. ಗ್ರಾಮ ಗ್ರಾಮಗಳಲ್ಲಿ ತ್ಯಾಜ್ಯ ನಿರ್ವಹಣೆ ಬಗ್ಗೆ ಹೆಚ್ಚು ಮುತುವರ್ಜಿ ವಹಿಸಿದ್ದಾರೆ ಆದರೆ ಪುರಸಭೆ ಮಾತ್ರ ಇನ್ನೂ ಕೂಡಾ ತ್ಯಾಜ್ಯ ಸಮಸ್ಯೆ ಗೆ ಪರಿ ಹಾರ ಕಂಡುಕೊಂಡಿಲ್ಲ ಎಂಬುದೇ ಬೇಸರದ ಸಂಗತಿ.

More from the blog

ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...

ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ...

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...