Monday, January 26, 2026

ಡಿ.24 – 26 ಕಲ್ಲಡ್ಕದಲ್ಲಿ ಪ್ರೇರಣಾ ಭವಿಷ್ ಆವಾಸೀಯ ಶಿಬಿರ

ಡಿ.24 – 26ರಂದು ಶ್ರೀರಾಮ ವಿದ್ಯಾಕೇಂದ್ರದ ಶ್ರೀರಾಮ ಪ್ರಥಮದರ್ಜೆ ಕಾಲೇಜು ಕಲ್ಲಡ್ಕ ಇದರ ಆಶ್ರಯದಲ್ಲಿ ಭವಿಷ್ಯದಲ್ಲಿ ಶಿಕ್ಷಕರಾಗಲು ಬಯಸುವ ವಿದ್ಯಾರ್ಥಿಗಳಿಗಾಗಿ ಭವಿಷ್ ಘಟಕದ ವತಿಯಿಂದ ಮೂರು ದಿನಗಳ ಆವಾಸೀಯ ಶಿಬಿರ ಹಮ್ಮಿಕೊಳ್ಳಲಾಗಿದೆ.

ಡಿ. 24ರ ಶನಿವಾರದಂದು  ಬಂಟ್ವಾಳದ ತಹಶೀಲ್ದಾರ್ ಸ್ಮಿತಾ ರಾಮು ರವರು ಶಿಬಿರದ ಉದ್ಘಾಟಿಸಲಿದ್ದಾರೆ. ಶ್ರೀರಾಮ ವಿದ್ಯಾ ಕೇಂದ್ರದ ಸಂಚಾಲಕ ವಸಂತ ಮಾಧವ, ಅ.ಭಾ.ಕುಟುಂಬ ಪ್ರಭೋದನ್ ಕಾರ್ಯಕಾರಣಿ ಸದಸ್ಯರಾದ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಉಪಸ್ಥಿತರಿರುವರು.

ದಿನಾಂಕ 26-12-22ರ ಸೋಮವಾರದಂದು  ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ  ಡಾ| ಪ್ರಭಾಕರ ಭಟ್ ಕಲ್ಲಡ್ಕ ರವರ ಅಧ್ಯಕ್ಷತೆಯಲ್ಲಿ ಸಮಾರೋಪ ನಡೆಯಲಿದ್ದು, ಶ್ರೀರಾಮ ವಿದ್ಯಾ ಕೇಂದ್ರದ ಅಧ್ಯಕ್ಷರಾದ ನಾರಾಯಣ ಸೋಮಯಾಜಿ ಹಾಗೂ ವಿವೇಕಾನಂದ ಸ್ವಾಯತ್ತ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಪ್ರೊ ವಿಷ್ಣು ಗಣಪತಿ ಭಟ್ ಉಪಸ್ಥಿತರಿರುವರು ವಿದ್ಯಾರ್ಥಿಗಳಿಗೆ ಸಂಪನ್ಮೂಲ ವ್ಯಕ್ತಿಗಳಿಂದ  ಮೌಲ್ಯ ಮತ್ತು ಕೌಶಲ್ಯ ಆಧಾರಿತ ಉಪನ್ಯಾಸದ ಜೊತೆಗೆ ಚಟುವಟಿಕೆಗಳು ನಡೆಯಲಿದೆ. ಈ ಕುರಿತು ಪ್ರಾಂಶುಪಾಲರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...