Wednesday, April 10, 2024

ಪ್ರೌಢಶಾಲಾ ಶಿಕ್ಷಕರು ಶಿಕ್ಷಣ ಸಚಿವರಾದ  ಸುರೇಶ್ ಕುಮಾರ್ ಭೇಟಿ , ಟಿಜಿಟಿಗಳ ಸಮಸ್ಯೆಗಳ ಕುರಿತು ಮನವಿ

ದ.ಕ.ಜಿಲ್ಲಾ ಸರ್ವ ಶಿಕ್ಷಾ ಅಭಿಯಾನದ ಪ್ರೌಢಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಬಂಟ್ವಾಳ ಶಾಸಕರಾದ  ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಇವರ ನೇತೃತ್ವದಲ್ಲಿ  ಶಿಕ್ಷಣ ಸಚಿವರಾದ  ಸುರೇಶ್ ಕುಮಾರ್ ಇವರನ್ನು ವಿಧಾನಸೌಧದಲ್ಲಿ ಭೇಟಿಯಾಗಿ ದ.ಕ ಜಿಲ್ಲಾ ಟಿಜಿಟಿಗಳ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘದ ಬಂಟ್ವಾಳ ಘಟಕದ ಅಧ್ಯಕ್ಷರಾದ ಶ್ರೀಮತಿ ಕೆ, ಕಾರ್ಯದರ್ಶಿ ಡಿಕ್ಸನ್ ಡಿಮೆಲ್ಲೋ, ಕೋಶಾಧಿಕಾರಿ ಪುಷ್ಪಾವತಿ, ಸದಸ್ಯರುಗಳಾದ ಸುಧಾಕರ ಶೆಟ್ಟಿ, ಹರೀಶ ಮೂಲ್ಯ, ಶಶಿಕಾಂತ, ಸತೀಶ್ ಕುಮಾರ್ ಉಪಸ್ಥಿತರಿದ್ದು, ಟಿಜಿಟಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಮಾನ್ಯ ಸಚಿವರ ಗಮನಕ್ಕೆ ತಂದರು. ಧನಾತ್ಮಕವಾಗಿ ಸ್ಪಂದಿಸಿದ ಮಾನ್ಯ ಸಚಿವರು ಪ್ರಾಥಮಿಕ ಶಿಕ್ಷಣದ ಗುಣಮಟ್ಟದ ಸುಧಾರಣೆಯ ಬಗ್ಗೆಯೂ ಸದ್ರಿ ಟಿಜಿಟಿಗಳ ಜೊತೆಗೆ ಚರ್ಚಿಸಿದರು.
ಸುಮಾರು ಹದಿನಾಲ್ಕು ವರ್ಷಗಳಿಂದ ಟಿಜಿಟಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಸಂಪೂರ್ಣವಾಗಿ ಬಗೆಹರಿಸುವುದರ ಜೊತೆಗೆ ನೇಮಕಾತಿ ಜಿಲ್ಲೆಯೊಳಗೇ ಉಳಿಸಿಕೊಡುವ ಬಗ್ಗೆಯೂ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಅಲ್ಲದೆ ಕಳೆದ ಒಂದೂವರೆ ವರ್ಷಗಳಿಂದ ಸರ್ವಶಿಕ್ಷಾ ಅಭಿಯಾನದ ಶಿಕ್ಷಕರು ಎದುರಿಸುತ್ತಿರುವ ವೇತನ ವಿಳಂಬದ ಸಮಸ್ಯೆಗೆ ಇತಿಶ್ರೀ ಹಾಡುವುದಾಗಿ ಈ ಸಂದರ್ಭದಲ್ಲಿ ಭರವಸೆ ನೀಡಿದರು.

More from the blog

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...