Sunday, April 7, 2024

ಕಬಕ: ಟ್ರಾಫಿಕ್ ಸಿಗ್ನಲ್ ಉದ್ಘಾಟನೆ

ವಿಟ್ಲ: ವಿಟ್ಲ ರೋಟರಿ ಕ್ಲಬ್ ವತಿಯಿಂದ ರೋಟರಿ ಕ್ಲಬ್ ಪುತ್ತೂರು ಸಿಟಿ ಇದರ ಸಹಕಾರದೊಂದಿಗೆ ಕಬಕ ಜಂಕ್ಷನ್‌ನಲ್ಲಿ ಟ್ರಾಫಿಕ್ ಪೊಲೀಸ್ ಸಿಗ್ನಲ್ ಪಾಯಿಂಟ್ ಸ್ಥಾಪಿಸಲಾಯಿತು. ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸದಸ್ಯೆ ದಿವ್ಯಾ ಪುರುಷೋತ್ತಮ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೀತಾ ಬಿ, ರಾಷ್ಟ್ರೀಯ ಹೆದ್ದಾರಿ ಸಹಾಯಕ ಇಂಜಿನಿಯರ್ ನಾಗರಾಜ್, ಪುತ್ತೂರು ನಗರ ಠಾಣೆ ಪೊಲೀಸ್ ನಿರೀಕ್ಷಕ ತಿಮ್ಮಪ್ಪ ನಾಯ್ಕ್, ಪುತ್ತೂರು ಸಂಚಾರಿ ಠಾಣೆ ಉಪನಿರೀಕ್ಷಕ ಚೆಲುವಯ್ಯ, ಕಬಕ ಪಂಚಾಯತ್ ಪಿಡಿಒ, ಟೋಪ್ಕೋ ಜ್ಯುವೆಲ್ಲರ್‍ಸ್ ಪಾಲುದಾರ ಮಹಮ್ಮದ್ ಟಿ. ಕೆ., ರೋಟರಿ ವಲಯ 4ರ ಉಪರಾಜ್ಯಪಾಲ ರಿತೇಶ್ ಬಾಳಿಗ, ವಲಯ ಸೇನಾನಿ ಸಂಜೀವ ಪೂಜಾರಿ, ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಜಯರಾಮ ರೈ, ನಿಕಟ ಪೂರ್ವ ಅಧ್ಯಕ್ಷ ಚರಣ್ ಕಜೆ, ಪುತ್ತೂರು ಸಿಟಿ ರೋಟರಿ ಕ್ಲಬ್ ಅಧ್ಯಕ್ಷ ಧರ್ಣಪ್ಪ ಗೌಡ ಮೊದಲಾದವರು ಭಾಗವಹಿಸಿದ್ದರು. ಪುರುಷೋತ್ತಮ ಮುಂಗ್ಲಿಮನೆ ಕಾರ್ಯಕ್ರಮ ಸಂಯೋಜಿಸಿದರು.

More from the blog

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...