Monday, April 8, 2024

ಸಿಡಿಲು ,ಮಿಂಚು ಸಹಿತ ಮಳೆ

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಸಿಡಿಲು ಮಿಂಚು ಸಹಿತ ಧಾರಾಕಾರವಾಗಿ ಸುರಿದ ಮಳೆ.

ರಾತ್ರಿ ಸುಮಾರು 7 ಗಂಟೆ ವೇಳೆಗೆ ಮೋಡ ಕವಿದ ವಾತಾವರಣವಿದ್ದು, ಬಳಿಕ ಸಿಡಿಲು , ಮಿಂಚು ಸಹಿತ ಮಳೆ ಸುರಿಯಿತು. ಅರ್ಧ ತಾಸುಗಳ ಕಾಲ ನಿರಂತರವಾಗಿ ಮಳೆ ಸುರಿದ್ದಿದ್ದು, ಕಾದು ಕುದಿಯುವ ಇಳೆಗೆ ತಂಪೆರೆದ ಮಳೆರಾಯನ ಕೃಪೆ ಯಿಂದ ರೈತರು ಸಂತಸವಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಸೆಖೆ ಜಾಸ್ತಿಯಾಗಿದ್ದು, ನಿರೀಕ್ಷಿತ ವಾಗಿ ಮಳೆ ಸುರಿದಿದ್ದರಿಂದ ತಂಪು ಗಾಳಿ ಬೀಸಿದೆ.
ಪ್ರತಿ ವರ್ಷ ಪೊಳಲಿ ಚೆಂಡು ನಡೆಯುವ ಸಂದರ್ಭದಲ್ಲಿ ಮಳೆ ಬರುವುದು ವಾಡಿಕೆಯಾಗಿದೆ.

More from the blog

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಲೋಕಾಯುಕ್ತ ಇಲಾಖೆಯಿಂದ ಸಾರ್ವಜನಿಕ ಜನಸಂಪರ್ಕ ಸಭೆ

ಬಂಟ್ವಾಳ: ಲೋಕಾಯುಕ್ತ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಜನಸಂಪರ್ಕ ಸಭೆ ಬಿಸಿರೋಡಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಎ. 8 ರಂದು ಸೋಮವಾರ ಲೋಕಾಯುಕ್ತ ಡಿ.ವೈ.ಎಸ್.ಪಿ. ಗಾನ ಕುಮಾರಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ...