Tuesday, January 27, 2026

ಬಂಟ್ವಾಳ: ಲಾರಿ ಢಿಕ್ಕಿ; ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು

ಬಂಟ್ವಾಳ: ಗಡಿಯಾರ ಸಮೀಪದ ಜೋಗಿಬೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ.

ತಾಲೂಕಿನ ಬುಡೋಳಿ ನಿವಾಸಿ ಇಬ್ರಾಹೀಂ ಎಂಬವರ ಪುತ್ರ ಮುಹಮ್ಮದ್ ಶರೀಫ್ (33) ಅಪಘಾತದಿಂದ ಮೃತಪಟ್ಟ ಯುವಕ.

ಶರೀಫ್ ಸಂಚರಿಸುತ್ತಿದ್ದ ಹೋಂಡಾ ಡಿವೋ ಸ್ಕೂಟರ್ ಗೆ ಲಾರಿಯೊಂದು ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದ್ದು ಶರೀಫ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

More from the blog

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...

ಕೊಡಾಜೆ : ತರ್ಬಿಯತುಲ್ ಇಸ್ಲಾಂ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಬಂಟ್ವಾಳ : ಕೊಡಾಜೆ ಬದ್ರಿಯಾ ಜುಮಾ ಮಸೀದಿ ಇದರ ಅಧೀನದ ತರ್ಬಿಯತುಲ್ ಇಸ್ಲಾಂ ಮದ್ರಸದ ವತಿಯಿಂದ ಗಣರಾಜ್ಯೋತ್ಸವ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಸೀದಿ ಅಧ್ಯಕ್ಷ ಅಬ್ಬಾಸ್ ನೇರಳಕಟ್ಟೆ ಧ್ವಜಾರೋಹಣ ನೆರವೇರಿಸಿದರು. ಮಸೀದಿ ಕಾರ್ಯದರ್ಶಿ ಎಸ್.ಎಂ.ರಫೀಕ್...

ಕಟೀಲು 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.27ರ ಸೇವೆಯಾಟಗಳ ವಿವರ : ಆಡಳಿತ ಮಂಡಳಿ, ಶ್ರೀ ಮಹಾಗಣಪತಿ ದೇವಸ್ಥಾನ,...