Tuesday, January 27, 2026

ಆಶಾ ಕಾರ್ಯಕರ್ತೆಗೆ ಬೆದರಿಕೆ ಆರೋಪ: ಇಬ್ಬರ ಬಂಧನ

ಬಂಟ್ವಾಳ: ಕೋವಿಡ್ -19 ಕರ್ತವ್ಯದಲ್ಲಿ ಇದ್ದ ಆಶಾ ಕಾರ್ಯಕರ್ತೆಯೊಬ್ಬರ ಮೇಲೆ ಹಲ್ಲೆಗೆ ಮುಂದಾಗಿ ಜೀವ ಬೆದರಿಕೆ ಒಡ್ಡಿರುವ ಆರೋಪದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ತಾಲೂಕಿನ ಸರಪಾಡಿ ಗ್ರಾಮದ ನಿವಾಸಿಗಳಾದ ಸಂದೀಪ್‌ ಮತ್ತು ಸಂತೋಷ‌ ಬಂಧಿತ ಆರೋಪಿಗಳು.

ಸರಪಾಡಿಯ ಮನೆಯೊಂದರಲ್ಲಿ ಕರೋನಾ ಪಾಸಿಟಿವ್‌ ಬಂದ ಮಹಿಳೆಯ ಆರೋಗ್ಯ ವಿಚಾರಿಸಿ, ಅವರಿಗೆ ಧೈರ್ಯ ತುಂಬಿ, ಮನೆಯಿಂದ ಹೊರ ಹೋಗದಂತೆ ತಿಳಿಸಿ ವಾಪಸ್ ಬರುತ್ತಿದ್ದ ಇಲ್ಲಿನ ಆಶಾ ಕಾರ್ಯಕರ್ತೆಯನ್ನು ಅಡ್ಡಗಟ್ಟಿದ ಸೋಂಕಿತ ಮಹಿಳೆಯ ಸಂಬಂಧಿಕರಾದ ಸಂದೀಪ್ ಮತ್ತು ಸಂತೋಷ್, ಅತ್ತೆಗೆ ಕರೋನ ಟೆಸ್ಟ್‌ ಮಾಡಿಸಿ ಪಾಸಿಟಿವ್‌ ಬರಿಸಿದ್ದೇ ನೀನು. ಪಾಸಿಟಿವ್‌ ಬರಿಸಿದರೆ ನಿನಗೆ ಭಾರೀ ಹಣ ಬರುತ್ತದೆ ಎಂದು ಹಲ್ಲೆಗೆ ಮುಂದಾಗಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.

ಆರೋಪಿಗಳ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಐ.ಪಿ.ಸಿ ಕಲಂ 354, 506, 269, 270 ಮತ್ತು ಕಲಂ 5 [1] ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020ರಂತೆ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರ ಪ್ರಕಟನೆ ತಿಳಿಸಿದೆ.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...