Friday, June 27, 2025

ಕೊನೆಗೂ ಭಾರತ್ ಬಯೋಟೆಕ್‌ನಿಂದ ಕರ್ನಾಟಕಕ್ಕೆ ‘ಕೋವಾಕ್ಸಿನ್’ ನೇರ ಪೂರೈಕೆ

ಬೆಂಗಳೂರು: ಭಾರತ್ ಬಯೋಟೆಕ್ ತನ್ನ ಕೊರೊನಾ ಲಸಿಕೆ ಕೋವಾಕ್ಸಿನ್ ಸರಬರಾಜನ್ನು ಮುಂದುವರಿಸುವುದಾಗಿ ಮಂಗಳವಾರ ತಿಳಿಸಿದ್ದು ಮೇ 1ರಿಂದ ಲಸಿಕೆಯನ್ನು 18 ರಾಜ್ಯಗಳಿಗೆ ಸರಬರಾಜು ಮಾಡಲಾಗಿದೆ ಎಂದು ಹೇಳಿದೆ.

ಈ ಹಿಂದೆ ಕರ್ನಾಟಕ ಹೊರತುಪಡಿಸಿ 14 ರಾಜ್ಯಗಳಿಗೆ ಲಸಿಕೆ ನೇರ ಪೂರೈಕೆ ಮಾಡುವುದಾಗಿ ತಿಳಿಸಿದ್ದ ಸಂಸ್ಥೆ ಈಗ ಕರ್ನಾಟಕ ಸೇರಿದಂತೆ 18 ರಾಜ್ಯಗಳಿಗೆ ಸರಬರಾಜು ಮಾಡಲಾಗುತ್ತದೆ ಎಂದು ಹೇಳಿದೆ.

ಈ ಹಿಂದೆ ಹೈದರಾಬಾದ್ ಮೂಲದ ಈ ಸಂಸ್ಥೆಯು ಕೇಂದ್ರ ಸರ್ಕಾರವು ಪಡೆದ ಹಂಚಿಕೆಯ ಆಧಾರದ ಮೇಲೆ ಆಂಧ್ರಪ್ರದೇಶ, ಅಸ್ಸಾಂ, ಛತ್ತೀಸಗಢ, ಗುಜರಾತ್, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್, ಮಧ್ಯಪ್ರದೇಶ, ಒಡಿಶಾ, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳಕ್ಕೆ ಲಸಿಕೆಗಳನ್ನು ನೇರವಾಗಿ ಕೋವಾಕ್ಸಿನ್‌ ಪೂರೈಸುತ್ತಿತ್ತು.

ಇದೀಗ ಈ ಬಗ್ಗೆ ಟ್ವೀಟ್‌ ಮಾಡಿರುವ ಕಂಪನಿಯ ಜಂಟಿ ವ್ಯವಸ್ಥಾಪಕ ನಿರ್ದೇಶಕ ಸುಚಿತ್ರಾ ಎಲಾ, ”ಕೋವಾಕ್ಸಿನ್ ಮೇ 10 ರಂದು ಸರಬರಾಜು ಆಗಿದೆ. 18 ರಾಜ್ಯಗಳಿಗೆ ಸರಬರಾಜು ಮಾಡಲಾಗುತ್ತಿದೆ. ಕೆಲವು ರಾಜ್ಯಗಳು ನಮ್ಮ ಈ ಹಿಂದಿನ ಸರಬರಾಜು ಉದ್ದೇಶದ ಬಗ್ಗೆ ದೂರಿರುವುದು ತಂಡಗಳಿಗೆ ಸಾಕಷ್ಟು ನಿರಾಶೆ ಉಂಟು ಮಾಡಿದೆ. ನಮ್ಮ 50 ಉದ್ಯೋಗಿಗಳು ಕೊರೊನಾ ಕಾರಣದಿಂದಾಗಿ ಕೆಲಸ ನಿರ್ವಹಿಸುತ್ತಿಲ್ಲ. ಆದರೂ ನಾವು ನಿಮಗಾಗಿ ಕೊರೊನಾ ಲಾಕ್‌ಡೌನ್‌ಗಳ ನಡುವೆಯೂ 24×7 ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ” ಎಂದು ಹೇಳಿದ್ದಾರೆ.

ಹಾಗೆಯೇ ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ದೆಹಲಿ, ಗುಜರಾತ್, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್, ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ತಮಿಳುನಾಡು, ತ್ರಿಪುರಾ, ತೆಲಂಗಾಣ, ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳಿಗೆ ಕೊರೊನಾ ಲಸಿಕೆ ಪೂರೈಸುವುದಾಗಿ ತಿಳಿಸಿದ್ದಾರೆ.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...