Thursday, July 10, 2025

ನಿವೃತ್ತ ಶಿಕ್ಷಕ ಬಿ.ರಾಮಚಂದ್ರ ರಾವ್ ಅವರಿಗೆ ಗೌರವಾಭಿನಂದನೆ

ಬಂಟ್ವಾಳ: ರಾರಸಂ ಫೌಂಡೇಶನ್, ‌ಲಯನ್ಸ್ ಕ್ಲಬ್ ಬಂಟ್ವಾಳ, ಜೇಸಿಐ ಬಂಟ್ವಾಳ, ಜೇಸಿಐ ಮಡಂತ್ಯಾರ್‍, ಜೇಸಿಐ ಜೋಡುಮಾರ್ಗ ನೇತ್ರಾವತಿ ವತಿಯಿಂದ ನಿವೃತ್ತ ಶಿಕ್ಷಕ ಬಿ.ರಾಮಚಂದ್ರ ರಾವ್ ಅವರಿಗೆ ಗೌರವಾಭಿನಂದನೆ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಬಿ.ರಾಮಚಂದ್ರ ರಾವ್ ಅವರು ಅಧ್ಯಾಪಕ ವೃತ್ತಿ ನನ್ನನ್ನು ಉತ್ತಮ ವ್ಯಕ್ತಿಯನ್ನಾಗಿ ಮಾಡಿ, ಮಾರ್ಗದರ್ಶನ ಮಾಡಿದೆ. ಜೇಸಿ ಸಂಸ್ಥೆಯ ಮೂಲಕ ಜೀವನದಲ್ಲಿ ಹೆಚ್ಚಿನ ಸಾಧನೆ ಮಾಡಲು ಸಾಧ್ಯವಾಗಿದ್ದು ಜೇಸಿ ಸಂಸ್ಥೆಗೆ ಆಭಾರಿಯಾಗಿದ್ದೇನೆ ಎಂದರು.

    

ಈ ಸಂಧರ್ಭದಲ್ಲಿ ಶಿರ್ವ ಸೈಂಟ್ ಮೇರಿಸ್ ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಜನ್ ಸಭಾಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಂಟ್ವಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೋಕ್ತೇಸರ ಡಾ.ಬಿ.ರಮೇಶಾನಂದ ಸೋಮಯಾಜಿ, ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಡಾ.ಹರ್ಷಾ ಸಂಪಿಗೆತ್ತಾಯ, ಲಯನ್ಸ್ ಜಿಲ್ಲಾ ಉಪರಾಜ್ಯಪಾಲ ವಂಸಂತ ಕುಮಾರ್‍ ಶೆಟ್ಟಿ, ನಿರ್ಮಲ ಹೃದಯ ಲಯನ್ಸ್ ವಿಶೇಷ ಚೇತನ ಮಕ್ಕಳ ಪಾಲನ ಕೇಂದ್ರದ ಸಂಚಾಲಕ ದಾಮೋದರ ಬಿ.ಎಂ. ಜೇಸಿಐ ಬಂಟ್ವಾಳ ದ ಅಧ್ಯಕ್ಷ ಯತೀಶ್ ಕರ್ಕೇರಾ, ಜೇಸಿಐ ಜೋಡುಮಾರ್ಗ ನೇತ್ರಾವತಿಯ ಅಧ್ಯಕ್ಷ ಹರ್ಷರಾಜ್, ಲಯನ್ಸ್ ಕ್ಲಬ್ ಬಂಟ್ವಾಳದ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಜೇಸಿಐ ಮಂಡತ್ಯಾರ್‍ ಅಧ್ಯಕ್ಷ ಅರುಣ್ ಮಾರಾಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ರಾರಾಸಂ ಫೌಂಡೇಶನ್ ಅಧ್ಯಕ್ಷ ರಾಧಕೃಷ್ಣ ಬಂಟ್ವಾಳ ಸ್ವಾಗತಿಸಿ, ಪ್ರಸ್ತಾಪಿಸಿದರು. ನಿರ್ದೇಶಕರಾದ ಕೇಶವ ಮಾಸ್ಟರ್‍ ವಂದಿಸಿದರು. ತುಳಸಿದಾಸ್ ಪೈ ಕಾರ್ಯಕ್ರಮ ನಿರೂಪಿಸಿದರು.

More from the blog

ಬಂಟ್ವಾಳದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಮತ್ತು ಅರಿವು ಕಾರ್ಯಕ್ರಮ.. 

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಛೇರಿ, ಬಂಟ್ವಾಳ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ಬಂಟ್ವಾಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ...

ಗುರುಪೂರ್ಣಿಮಾ ಪ್ರಯುಕ್ತ ಅಮ್ಟೂರಿನಲ್ಲಿ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾದ ದಿನೇಶ್ ಆಮ್ಟೂರು ಇವರ ನೇತೃತ್ವದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಥಮಿಕ ಶಿಕ್ಷಣವನ್ನು ಮಾಡಲು ಪ್ರೇರಣೆ ಕೊಟ್ಟಂತಹ ಗುರುಗಳಾದ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ಮುಖ್ಯೋಪಾಧ್ಯಾಯರಾದ...

ಗುರುಪೂರ್ಣಿಮಾ ಪ್ರಯುಕ್ತ ಪ್ರಸೂತಿ ತಜ್ಞೆ ವೆಂಕಮ್ಮರಿಗೆ ಬಿಜೆಪಿ ವತಿಯಿಂದ ಗೌರವರ್ಪಣೆ..

ಬಂಟ್ವಾಳ : ತಾಲೂಕಿನ ಕೊಡಂಬೆಟ್ಟು ಪರಿಸರದಲ್ಲಿ ನೂರಾರು ಮಂದಿಗಳ ಬಾಳಿನಲ್ಲಿ ಬೆಳಕು ಪ್ರಜ್ವಲಿಸಿದ ಪ್ರಸೂತಿ ತಜ್ಞೆ ವೆಂಕಮ್ಮ ಎಂಬವರಿಗೆ ಗುರು ಪೂರ್ಣಿಮಾ ದಿನಾಚರಣೆಯ ಪ್ರಯುಕ್ತ. ಬಿಜೆಪಿ ವತಿಯಿಂದ ಪಕ್ಷದ ನಾಯಕಿ ಸುಲೋಚನ ಜಿ....

ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ, ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಸಾಮೂಹಿಕ ವಿವಾಹ..

ಬಂಟ್ವಾಳ : ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ (ಅಬುದಾಬಿ), ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಜುಲೈ 13 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಹಾಲ್ ನಲ್ಲಿ ನಡೆಯಲಿರುವ ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ...