ಕರ್ನಾಟಕ ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪನವರನ್ನು ಹಾಗೂ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ನಿವಾಸದಲ್ಲಿ ಇಂದು ಬೆಳಗ್ಗೆ ಹತ್ತು ಗಂಟೆಗೆ ಭಾರತೀಯ ಜನತಾ ಪಾರ್ಟಿ ಎಸ್ಸಿ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷರಾದ ದಿನೇಶ್ ಅಮ್ಟೂರು ಅವರು ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ವಿನಯ ನೇತ್ರ ದದ್ದಲ್ ಕಾರ್ಡ್ ಶೀನ ಮಾಸ್ತಿಕಟ್ಟೆ ರಾಜ್ಯ ಎಸ್ಸಿ ಮೋರ್ಚಾ ಕಾರ್ಯದರ್ಶಿ ಬಿಎಸ್ ವಸಂತ್ ಕುಮಾರ್ ಹಾಗೂ ಜಿಲ್ಲೆಯ ಎಸ್ಸಿ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.