Thursday, January 29, 2026

ಬದನಡಿ: ಪರಿಸರ ಸಂರಕ್ಷಣಾ ಅಭಿಯಾನ

ಶ್ರೀ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ‌ ಬದನಡಿ ಕೊಯಿಲ ಇದರ ವತಿಯಿಂದ ಪರಿಸರ ಸಂರಕ್ಷಣೆ ನಮ್ಮಲ್ಲೆರ ಹೊಣೆ ಎನ್ನುವ ಸಂಕಲ್ಪದಡಿ ಕೊಯಿಲ ಗ್ರಾಮದ ಕೈತ್ರೋಡಿ ಕ್ವಾಟ್ರಸ್ ನ ರುದ್ರಭೂಮಿಯಲ್ಲಿ ಸ್ವಚ್ಚತಾ ಅಭಿಯಾನ‌ ಹಾಗೂ ಗಿಡನೆಡುವ ಕಾರ್ಯಕ್ರಮ ನಡೆಯಿತು. ಕೊರಗಜ್ಜ ಕ್ಷೇತ್ರದ ಮೋಕ್ತೇಸರ ಲೋಕೆಶ್ ಕೈತ್ರೋಡಿ ಉದ್ಘಾಟಿಸಿದರು. ಭಜನಾ ಮಂಡಳಿ ಸಂಸ್ಥಾಪಕ ರವೀಂದ್ರ ಪೂಜಾರಿ ಬದನಡಿ, ಅಧ್ಯಕ್ಷ ದಿನೇಶ್ ಸುವರ್ಣ ರಾಯಿ,ಮಹಿಳಾ ಅಧ್ಯಕ್ಷೆ ಶ್ರೀಮತಿ ಆಶಾ, ಕಾರ್ಯದರ್ಶಿ ರಕ್ಷಿತ್ ಅಂತರ ಹಾಗೂ ಭಜನಾ ಮಂಡಳಿ‌ಯ 80ಸದಸ್ಯರು ಉಪಸ್ಥಿತರಿದ್ದರು‌. ರುದ್ರಭೂಮಿಯ 0.60 ಎಕರೆ ಭೂಮಿಯಲ್ಲಿ ಫಲನೀಡುವ ಹಲಸು, ಗೇರು, ಸಫೋಟ, ಬಾದಾಮಿ, ರಾಂಬೂಟನ್, ಸಾಗುವನಿ ಈಗೆ 85 ಗಿಡಗಳನ್ನು ನೆಟ್ಟು ಪ್ರಕೃತಿ ಹಾಗೂ ಪಕ್ಷಿ‌ಸಂಕುಲದ ಉಳಿವಿಗಾಗಿ ಸಂಕಲ್ಪತೊಡಲಾಯಿತು.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...