Thursday, July 10, 2025

ಬಂಟ್ವಾಳ ಸರ್ವೇ ಇಲಾಖೆಗೆ ಎ.ಸಿ.ಬಿ ದಾಳಿ

ಬಂಟ್ವಾಳ: ಬಂಟ್ವಾಳ ಸರ್ವೇ ಇಲಾಖೆಯ ಸರ್ವೇಯರ್‌ರನ್ನು ಮಹಿಳೆಯರೊಬ್ಬರಿಂದ ಜಾಗದ ಗಡಿಗುರುತಿಗಾಗಿ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿ ದ.ಕ.ಜಿಲ್ಲಾ ಎಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಿ.ಸಿ.ರೋಡಿನಲ್ಲಿರುವ ಮಿನಿ ವಿಧಾನಸೌಧದ ಸರ್ವೇ ಇಲಾಖೆ ಕಚೇರಿಯಲ್ಲಿ ಮಹಿಳೆಯಿಂದ ೬ ಸಾವಿರ ರೂ. ಲಂಚ ಪಡೆಯುತ್ತಿದ್ದ ಸಂದರ್ಭ ಎಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿ ಸರ್ವೇಯರ್ ಸುರೇಶ್‌ನನ್ನು ಬಂಧಿಸಿದ್ದಾರೆ.

ಕಳ್ಳಿಗೆ ನಿವಾಸಿ ಪ್ರೀಮಾ ಸರಿತಾ ಪಿಂಟೋ ಅವರು ತಮ್ಮ ಜಾಗದ ಗಡಿಗುರುತಿಗೆ ಸರ್ವೇ ಮಾಡುವಂತೆ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಆಗ ಸರ್ವೇಯರ್ ೭ ಸಾವಿರ ಲಂಚಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಮಹಿಳೆ ಎಸಿಬಿ ಪೊಲೀಸರಿಗೆ ದೂರು ನೀಡಿದ್ದರು. ಪಶ್ಚಿಮ ವಲಯ ಎಸಿಬಿ ಎಸ್‌ಪಿ ಸೈಮನ್ ಅವರ ಮಾರ್ಗದರ್ಶನ ಡಿವೈಎಸ್‌ಪಿ ಕೆ.ಸಿ.ಪ್ರಕಾಶ್ ನೇತೃತ್ವದಲ್ಲಿ ಇನ್ಸ್ಪೆಕ್ಟರ್‌ಗಳಾದ ಗುರುರಾಜ್ ಹಾಗೂ ಶ್ಯಾಮ್‌ಸುಂದರ್ ಎಸಿಬಿ ಸಿಬಂದಿ ಜತೆ ದಾಳಿ ನಡೆಸಿದ್ದರು.

More from the blog

ಸುಳ್ಳು ಸುದ್ದಿ ನಿಯಂತ್ರಣಕ್ಕೆ ಮುಂದಿನ ಅಧಿವೇಶನದಲ್ಲೇ ಮಸೂದೆ : ಗೃಹ ಸಚಿವ ಜಿ. ಪರಮೇಶ್ವರ್..

ಮಂಗಳೂರು : ಸುಳ್ಳು ಸುದ್ದಿಗಳ ಹಾವಳಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿ ಮೀರುತ್ತಿದೆ. ಈ ಹಿನ್ನಲೆಯಲ್ಲಿ ಸುಳ್ಳು ಸುದ್ದಿ ಹರಡುವುದು ಹಾಗೂ ದ್ವೇಷ ಭಾಷಣ ಮಾಡುವವರ ವಿರುದ್ಧ ಮುಂದಿನ ಅಧಿವೇಶನದಲ್ಲಿ ಮಸೂದೆ...

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...