Friday, July 4, 2025

ಮಸೀದಿಯೊಳಗೆ ನುಗ್ಗಿದ ಕಾರು

ಬಂಟ್ವಾಳ, ಅ. ೨೨: ಚಾಲಕನ‌ ನಿಯಂತ್ರಣ ತಪ್ಪಿದ ಓಮ್ನಿ ಕಾರುವೊಂದು ಮಸೀದಿಯ ಆವರಣಗೋಡೆಯೊಳಗೆ ನುಗ್ಗಿದ ಪರಿಣಾಮ ಚಾಲಕ ಸೇರಿ ಒಟ್ಟು ಐವರು ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ 10ನೇ ಮೈಲುಕಲ್ಲು ಎಂಬಲ್ಲಿ ಮಂಗಳವಾರ ನಡೆದಿದೆ.

ಹತ್ತನೇ ಮೈಲುಕಲ್ಲು ನಿವಾಸಿ ಇಸ್ಮಾಯಿಲ್, ಸುಲೈಮಾನ್ ಗಾಯಗೊಂಡವರೆಂದು ತಿಳಿದುಬಂದಿದ್ದು, ಕಾರಿನಲ್ಲಿದ್ದ ಮೂವರ ಪ್ರಯಾಣಿಕರ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಪ್ರಸಾದ್ ನೇತ್ರಾಲಯಕ್ಕೆ ಸೇರಿದ ಓಮ್ನಿ ಕಾರು ಬಿ.ಸಿ.ರೋಡ್ ನಿಂದ ಮಂಗಳೂರು ಕಡೆಗೆ ತೆರಳುತ್ತಿರುವಾಗ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಫರಂಗಿಪೇಟೆ ಸಮೀಪದ ಹತ್ತನೇ ಮೈಲು ಕಲ್ಲು ಎಂಬಲ್ಲಿ ಚಾಲಕನ‌ ನಿಯಂತ್ರಣ ತಪ್ಪಿದೆ ಎನ್ನಲಾಗಿದೆ. ಪರಿಣಾಮ ಹೆದ್ದಾರಿ ಪಕ್ಕದಲ್ಲಿರುವ ತ್ವಾಹಾ ಜುಮಾ ಮಸೀದಿಯ ಆವರಣಗೋಡೆಯಾಗಿ ಏರಿ ನಿಂತಿದೆ. ಈ ವೇಳೆ ಮಸೀದಿ ಆವರಣದಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ‌. ಘಟನೆಯಿಂದ ಕಾರಿನ ಮುಂಭಾಗ ಜಖಂಗೊಂಡಿದ್ದು, ಮಸೀದಿಗೆ ಹಾನಿಯಾಗಿದೆ.
ಅಪಘಾತ ದೃಶ್ಯ ಮಸೀದಿಯ‌ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ತೆರಳಿದ್ದಾರೆ.

More from the blog

ಬೆಂಜನಪದವು ಶಾಲೆ : ಉಚಿತ ಯಕ್ಷಗಾನ ನಾಟ್ಯ ತರಗತಿ ಶುಭಾರಂಭ..

ಬಂಟ್ವಾಳ: ಬೆಂಜನಪದವು ಸರಕಾರಿ ಪದವಿಪೂರ್ವ ಕಾಲೇಜು ಬೆಂಜನಪದವು ಪ್ರೌಢಶಾಲಾ ವಿಭಾಗದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಉಚಿತ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ ಗೊಂಡಿತು. ಫೌಂಡೇಶನ್ ನ ಸಂಚಾಲಕರಾದ ಶ್ರೀ ವಾಸುದೇವ ಐತಾಳ್ ದೀಪ...

ಜು.12ರಂದು ಬಂಟ್ವಾಳ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್..

ಬಂಟ್ವಾಳ : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜು.12ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ಇವರ...

ಅಕ್ರಮ ಗಣಿಗಾರಿಕೆ: ಲಾರಿಗಳನ್ನು ತಡೆದ ಗ್ರಾಮಸ್ಥರು..

ಬಂಟ್ವಾಳ: ಪಲ್ಲಮಜಲು ಕೋರೆಯಿಂದ ಲಾರಿಗಳು ಜಲ್ಲಿಕಲ್ಲು ಲೋಡ್ ಮಾಡಿಕೊಂಡು ಹೋಗುತ್ತಿದ್ದ ವೇಳೆ ಸಾರ್ವಜನಿಕರಿಂದ ಲಾರಿಗಳನ್ನು ತಡೆದು ಪ್ರತಿಭಟಿಸಿದ ಘಟನೆ ಇಂದು ನಡೆದಿದೆ. ಪಲ್ಲಮಜಲು ಗಣಿಗಾರಿಕೆಯಿಂದ ಸ್ಥಳೀಯ ಮನೆಗಳಿಗೆ ಹಾನಿಯಾಗಿದೆ ಎಂದು ಗ್ರಾಮಸ್ಥರು ಗಣಿಇಲಾಖೆ ಹಾಗೂ...

Bantwal : ನೇತ್ರಾವತಿ ‌ನದಿಯಲ್ಲಿ ಅಪರಿಚಿತ ಗಂಡಸಿನ‌ ಮೃತದೇಹ ಪತ್ತೆ : ಗುರುತು ಪತ್ತೆಗೆ ಮನವಿ..

ಬಂಟ್ವಾಳ: ಇಲ್ಲಿನ‌ ನೇತ್ರಾವತಿ ‌ನದಿಯಲ್ಲಿ ಜುಲೈ 2 ರಂದು ಅಪರಿಚಿತ ಗಂಡಸಿನ‌ ಶವ ಪತ್ತೆಯಾಗಿದೆ ಎಂದು ಬಂಟ್ವಾಳ ನಗರ ಠಾಣಾ ಪೋಲೀಸರು ಪ್ರಕರಟನೆಯಲ್ಲಿ ತಿಳಿಸಿದ್ದಾರೆ. ಸುಮಾರು 45 ರಿಂದ 50 ವರ್ಷ ವಯಸ್ಸಿನವರಾಗಿದ್ದು,ಇವರ ಗುರುತು...