Thursday, January 29, 2026

ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು : ಬಸ್‌ನೊಂದಿಗೆ ಚಾಲಕ ಪರಾರಿ

ಮಂಗಳೂರು: ರಸ್ತೆ ದಾಟುತ್ತಿದ್ದ ವೇಳೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಬೆಂದೂರ್ ವೆಲ್ ಬಳಿ ಸಂಭವಿಸಿದೆ.

ಮೃತರನ್ನು ಐರಿನ್ ಡಿಸೋಜ ಎಂದು ಗುರುತಿಸಲಾಗಿದೆ.

ಆ್ಯಗ್ನೆಸ್ ಸರ್ಕಲ್ ಕಡೆಯಿಂದ ಬಂದ ಸಿಟಿ ಬಸ್ ಬೆಂದೂರ್ ವೆಲ್ ಜಂಕ್ಷನ್ ನಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿದೆ. ಈ ವೇಳೆ ಅದೇ ಬಸ್ಸಿನಿಂದ ಇಳಿದು ಬಸ್ಸಿನ ಮುಂಭಾಗದಿಂದ ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಐರಿನ್ ಅವರ ಮೈಮೇಲೆ ಬಸ್ಸಿನ ಮುಂಭಾಗದ ಚಕ್ರ ಹರಿದಿದೆ. ಇದರಿಂದ ತೀವ್ರ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನು ಪಾದಾಚಾರಿ ಮಹಿಳೆಗೆ ಖಾಸಗಿ ಬಸ್ ಢಿಕ್ಕಿ ಹೊಡೆದಿದ್ದು, ಬಸ್ ಚಾಲಕ ಬಸ್ ನಿಲ್ಲಿಸದೆ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಧಾವಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

 

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...