ಬಂಟ್ವಾಳ: ಟ್ಯಾಂಕರ್ ಡಿಕ್ಕಿಯಾಗಿ ಪಾದಾಚಾರಿಯೋರ್ವ ಮೃತಪಟ್ಟ ಘಟನೆ ಬಿಸಿರೋಡಿನ ಕೈಕಂಬ ಎಂಬಲ್ಲಿ ಬೆಳಿಗ್ಗೆ ನಡೆದಿದೆ.
ಮಲ್ಲೂರು ನಿವಾಸಿ ಯಾದವ ಪೂಜಾರಿ ( 50) ಅವರು ಅಪಘಾತದಲ್ಲಿ ಮೃತರಾದವರು.
ಬಿಸಿರೋಡಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ತರಕಾರಿ ತರಲು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ಡಿಕ್ಕಿಯಾಗಿದೆ.
ಕೂಡಲೇ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆ ಗೆ ದಾಖಲಿಸಲಾಗಿದೆ.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಇವರು ಆಸ್ಪತ್ರೆ ಯಲ್ಲಿ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ಬಂಟ್ವಾಳ ವೃತ್ತ ನಿರೀಕ್ಷಕ ಶರಣ ಗೌಡ, ಮೆಲ್ಕಾರ್ ಟ್ರಾಫಿಕ್ ಎಸ್.ಐ.ಮಂಜುನಾಥ್ ಅವರು ಬೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ
