Wednesday, January 28, 2026

ಆಂಬುಲೆನ್ಸ್ ಗೆ ಲಾರಿ ಡಿಕ್ಕಿ: ಮಹಿಳೆ ಮೃತಪಟ್ಟು ಮೂವರು ಗಂಭೀರ

ಬಂಟ್ವಾಳ: ಗೂಡ್ಸ್ ಟೆಂಪೊ ಹಾಗೂ ಆಂಬುಲೆನ್ಸ್ ನಡುವೆ ಅಪಘಾತ ಸಂಭವಿಸಿ ಮಹಿಳೆಯೋರ್ವರು ಮೃತಪಟ್ಟು ಮೂವರು ಗಂಭೀರ ಗಾಯಗೊಂಡ ಘಟನೆ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಆಂಬುಲೆನ್ಸ್ ನಲ್ಲಿದ್ದವರು ಇಡ್ಕಿದು ಗ್ರಾಮದ ಏಮಾಜೆ ನಿವಾಸಿಗಳು ಎಂದು ತಿಳಿದುಬಂದಿದೆ.


ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ಸಾಗಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.
ರೋಗಿಯೊಬ್ಬರ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಮಹಾವೀರ ಆಸ್ಪತ್ರೆ ಯಿಂದ ಮಂಗಳೂರಿಗೆ ಆಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಪುತ್ತೂರಿನ ಕಡೆಗೆ ಹೋಗುತ್ತಿದ್ದ ಗೂಡ್ಸ್ ಟೆಂಪೋ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಘಟನೆಯಿಂದ ಏಮಾಜೆ ನಿವಾಸಿ ಪಾರ್ವತಿ (58)ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಆಂಬುಲೆನ್ಸ್ ನಲ್ಲಿದ್ದ ವ್ಯಕ್ತಿಗೂ ಗಾಯವಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ. ಪುತ್ತೂರು ವೃತ್ತ ನಿರೀಕ್ಷಕರು ಹಾಗೂ ವಿಟ್ಲ ಪೊಲೀಸರು ಬೇಟಿ ನೀಡಿದ್ದಾರೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...